Wednesday, January 22, 2025

ರಾಹುಲ್ ಗಾಂಧಿಗೆ ಮತ್ತೊಂದು ಬಿಗ್ ಶಾಕ್ : ಲೋಕಸಭಾ ಸದಸ್ಯತ್ವದಿಂದ ರಾಗಾ ಅನರ್ಹ

ಬೆಂಗಳೂರು : ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಹಾಗೂ ಇಡೀ ಕಾಂಗ್ರೆಸ್ ಪಾಳಯಕ್ಕೆ ಇದು ಬಿಕ್ ಶಾಕ್!

ಹೌದು, ರಾಹುಲ್ ಗಾಂಧಿ ಅವರಿಗೆ ದೊಡ್ಡ ಹೊಡೆತ ಬಿದ್ದಿದೆ. ಅವರ ಸಂಸತ್ ಸದಸ್ಯತ್ವ ರದ್ದಾಗಿದೆ. ‘ಮೋದಿ ಉಪನಾಮ’ ಹೇಳಿಕೆ ನೀಡಿದ್ದಕ್ಕಾಗಿ ರಾಹುಲ್ ಅವರನ್ನು ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಆದೇಶಿಸಿದ ಬೆನ್ನಲ್ಲೆ ಸ್ಪೀಕರ್ ಓಂ ಬಿರ್ಲಾ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ.

ಗುಜರಾತ್‌ನ ಸೂರತ್ ನ್ಯಾಯಾಲಯ, 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಭಾರತೀಯ ದಂಡ ಸಂಹಿತೆ ಸೆಕ್ಷನ್ 499 ಮತ್ತು 500 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಹುಲ್ ವಯನಾಡು ಸಂಸದ

ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿ ವಯನಾಡು ಸಂಸದರಾಗಿದ್ದಾರೆ. ಸದ್ಯ ಇವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಗುಜರಾತ್‌ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿತ್ತು.

RELATED ARTICLES

Related Articles

TRENDING ARTICLES