Monday, December 23, 2024

ಕೇಂದ್ರದಿಂದ ಸಿಹಿ ಸುದ್ದಿ : LPG ಗ್ಯಾಸ್ ಸಿಲಿಂಡರ್ ಸಬ್ಸಿಡಿ ವಿಸ್ತರಣೆ

ಬೆಂಗಳೂರು : ಕೇಂದ್ರ ಸರ್ಕಾರ ದೇಶದ ಜನತೆಗೆ ಸಿಹಿ ಸುದ್ದಿ ನೀಡಿದೆ. ಪ್ರಧಾನ ಮಂತ್ರಿ ಉಜ್ವಲ​ ಯೋಜನೆಯ ಫಲಾನುಭವಿಗಳಿಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಸಬ್ಸಿಡಿ ವಿಸ್ತರಣೆ ಮಾಡಿದೆ.

ಹೌದು, ಕೇಂದ್ರ ಸರ್ಕಾರವು ಗೃಹಬಳಕೆಯ ಎಲ್​ಪಿಜಿ ಗ್ಯಾಸ್​ ಸಿಲಿಂಡ್​ ಮೇಲೆ ನೀಡುವ 200 ರೂ. ಸಬ್ಸಿಡಿಯನ್ನು 2023-24ನೇ ಸಾಲಿಗೂ ವಿಸ್ತರಿಸಿದೆ.

ಉಜ್ವಲ ಯೋಜನೆ ಅಡಿ 9.59 ಫಲಾನುಭವಿಗಳು ವರ್ಷಕ್ಕೆ 14.2 ಕೆಜಿ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ನಲ್ಲಿ 200 ರೂ. ಸಬ್ಸಿಡಿ ಪಡೆಯುತ್ತಾರೆ. ಇನ್ನು ಫಲಾನುಭವಿಗಳಿಗೆ ಸರ್ಕಾರ ವರ್ಷಕ್ಕೆ 12 ಸಿಲಿಂಡರ್​ಗಳನ್ನು ತುಂಬಲು ಅನುಮತಿ ನೀಡಿದೆ. ಅಂದರೆ ಒಂದು ವರ್ಷದಲ್ಲಿ 12 ಅಡುಗೆ ಅನಿಲ ಸಿಲಿಂಡರ್​ಗಳ ಮೇಲೆ ಪ್ರತಿ ಸಿಲಿಂಡರ್​ಗೆ 200 ರೂ. ಸಬ್ಸಿಡಿ ನೀಡಿದಂತಾಗುತ್ತದೆ.

ಕೇಂದ್ರ ಸರ್ಕಾರ ಈ ಯೋಜನೆಗೆ 2022-23ನೇ ಸಾಲಿನಲ್ಲಿ 6,100 ಕೋಟಿ ರೂ. ವ್ಯಯಿಸಿತ್ತು. 2023-24ನೇ ಸಾಲಿನಲ್ಲಿ ಸುಮಾರು 1 ಸಾವಿರ ಕೋಟಿಗಳಷ್ಟು ಹೆಚ್ಚಾಗಲಿದ್ದು, 7,680 ಕೋಟಿ ಈ ಯೋಜನೆಗೆ ಮೀಸಲಿರಿಸಿದೆ. ಇದರಿಂದ ಸರ್ಕಾರಕ್ಕೆ ಸಾವಿರ ಕೋಟಿಗಳಷ್ಟು ಹೊರೆ ಬೀಳಲಿದೆ. ಸಬ್ಸಿಡಿ ನೇರವಾಗಿ ಹಣ ಫಲಾನುಭವಿಗಳ ಖಾತೆಗಳಿಗೆ ಕ್ರೆಡಿಟ್​ ಆಗುತ್ತದೆ.

RELATED ARTICLES

Related Articles

TRENDING ARTICLES