Wednesday, January 22, 2025

ದಳಪತಿಗೆ ದೀದಿ ಬಲ : ಜೆಡಿಎಸ್ ಪರ ಸಿಎಂ ಮಮತಾ ಪ್ರಚಾರ

ಬೆಂಗಳೂರು : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ನಾಯಕರು ಕರ್ನಾಟಕಕ್ಕೆ ಭೇಟಿ ನೀಡುವುದು ಸಾಮಾನ್ಯವಾಗಿದೆ. ಬಿಜೆಪಿ ಪರ ಪ್ರಧಾನಿ ನರೇಂದ್ರ ಮೋದಿ ಹಾದಿಯಾಗಿ ರಾಷ್ಟ್ರೀಯ ನಾಯಕರ ದಂಡೇ ಬರುತ್ತಿದೆ. ಇದೀಗ, ದಳಪತಿ ಎಚ್.ಡಿ ಕುಮಾರಸ್ವಾಮಿಗೆ ಬಲ ತುಂಬಲು ರಾಜ್ಯಕ್ಕೆ ದೀದಿ ಮಮತಾ ಎಮಟ್ರಿ ಕೊಡಲಿದ್ದಾರೆ.

ಹೌದು, ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಶುಕ್ರವಾರ ಕೋಲ್ಕತ್ತಾಗೆ ತೆರಳಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ ಚರ್ಚಿಸಿದದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಪರ ಪಶ್ಚಿಮ ಬಂಗಾಳ ಸಿಎಂ ಪ್ರಚಾರ ನಡೆಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಯಾದಗಿರಿ ಜಿಲ್ಲೆಯ ಗುರುಮಿಠ್ಕಲ್‌ ಕ್ಷೇತ್ರದಲ್ಲಿ ಶುಕ್ರವಾರ ಪಂಚರತ್ನ ರಥಯಾತ್ರೆ ಮುಗಿಸಿದ ಕುಮಾರಸ್ವಾಮಿ, ವಿಶೇಷ ವಿಮಾನದಲ್ಲಿ ಕೋಲ್ಕತ್ತಾಗೆ ತೆರಳಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದರು. ಬಳಿಕ ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ದೀದಿ ಜೊತೆ ಸುದೀರ್ಘ ಮಾತುಕತೆ

ಮಮತಾ ಬ್ಯಾನರ್ಜಿ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಲಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ, ರಾಷ್ಟ್ರ ರಾಜಕಾರಣ, ರಾಹುಲ್‌ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಅನರ್ಹತೆ ಸೇರಿದಂತೆ ಅನೇಕ ವಿದ್ಯಮಾನಗಳ ಬಗ್ಗೆ ಚರ್ಚಿಸಲಾಯಿತು.

ಈ ಬಾರಿ ಕರ್ನಾಟಕದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಮತಾ ಬ್ಯಾನರ್ಜಿ ಅವರು ವಿಶ್ವಾಸ ವ್ಯಕ್ತಪಡಿಸಿದರು ಎಂದು ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES