Wednesday, January 22, 2025

ನಾನು ಅನರ್ಹ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಬಯೋವನ್ನು ಬದಲಾಯಿಸಿದ್ದಾರೆ.

ತಮ್ಮ ಬಯೋದಲ್ಲಿ Dis’Qualified MP ಎಂದು ಬದಲಾಯಿಸಿದ್ದಾರೆ. ಅಂದರೆ ಅನರ್ಹ ಸಂಸದ ಎಂದು ತಾವೇ ಬರೆದುಕೊಂಡಿದ್ದಾರೆ. ಮೋದಿ ಉಪನಾಮ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟದ ಆರೋಪದ ಮೇಲೆ ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಅದೇ ಸಮಯದಲ್ಲಿ, ಈಗ ತಮ್ಮ ಬಯೋದಲ್ಲಿ, ರಾಹುಲ್ ತಮ್ಮನ್ನು ಅನರ್ಹ ಸಂಸದ ಎಂದು ಕರೆದುಕೊಂಡಿದ್ದಾರೆ.

30 ದಿನಗಳ ಜಾಮೀನು

2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.

ಬಯೋನಲ್ಲಿ ಏನಿದೆ?

‘ಇದು ರಾಹುಲ್ ಗಾಂಧಿಯ ಅಧಿಕೃತ ಖಾತೆ. ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸದಸ್ಯ. ಅನರ್ಹಗೊಂಡ ಸಂಸದ’ (ಲೋಕಸಭಾ ಸದ್ಸಯ) ಎಂದು ನಮೂದಿಸಲಾಗಿದೆ.

ಇನ್ನೂ, ರಾಹುಲ್ ಗಾಂಧಿ ಅನರ್ಹತೆಯನ್ನು ವಿರೋಧಿಸಿ ದೆಹಲಿಯಲ್ಲಿ ಎಐಸಿಸಿ ಇಂದು ‘ಸಂಕಲ್ಪ ಸತ್ಯಾಗ್ರಹ’ ನಡೆಸುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಕೆ.ಸಿ ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ನಾಯಕರು ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದಾರೆ.

RELATED ARTICLES

Related Articles

TRENDING ARTICLES