ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಎಲ್ಲಾ ಪಕ್ಷಗಳು ಸನ್ನದ್ಧವಾಗಿವೆ. ಅದರಲ್ಲೂ ಜೆಡಿಎಸ್ ಪ್ರಾಬಲ್ಯ ಇರುವ ಕಡೆ ದಳಪತಿ ವರ್ಚಸ್ಸು ಕುಗ್ಗಿಸಲು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ತಾಲೀಮು ನಡೆಸಿವೆ.
ಹೌದು, ದಳಪತಿಗಳ ಕೋಟೆ ಛಿದ್ರ ಮಾಡಲು ಬಿಜೆಪಿ ಪಕ್ಕಾ ಸ್ಟ್ರಾಟರ್ಜಿಯೊಂದಿಗೆ ಚುನಾವಣಾ ಕಣಕ್ಕೆ ಇಳಿದಿದೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಗೆ ತಮ್ಮ ಸಂಪೂರ್ಣ ಬಹುಮತ ಘೋಷಿಸಿ, ದಳಪತಿಗಳ ವಿರುದ್ಧ ತೊಡೆ ತಟ್ಟಿದ್ದಾರೆ.
ಮದ್ದೂರಿನ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಸುಮಲತಾ ಅಂಬರೀಶ್ ಭಾಗವಹಿಸಿದ್ದಾರೆ. ಜೆಡಿಎಸ್ ಭದ್ರಕೋಟೆ ಗೋಡೆ ಹೊಡೆದಿದೆ. ಛಿದ್ರ ಮಾಡವುದು ಮಾತ್ರ ಬಾಕಿ ಎಂದು ಹೇಳುವ ಮೂಲಕ ದಳಪತಿಗಳ ವಿರುದ್ಧ ಸಂಸದೆ ಸುಮಲತಾ ಟೀಕಾಪ್ರಹಾರ ನಡೆಸಿದ್ದಾರೆ.
ಈ ಟೈಮ್ ಮಿಸ್ ಮಾಡಿಕೊಳ್ಳಲ್ಲ
‘ನನ್ನ ಚುನಾವಣೆ(ಲೋಕಸಭಾ ಚುನಾವಣೆ)ಯಲ್ಲೇ ಜೆಡಿಎಸ್ ಭದ್ರಕೋಟೆಯ ಗೋಡೆ ಹೊಡೆದುಹೋಗಿದೆ. ಈ ಚುನಾವಣೆಯಲ್ಲಿ ಜೆಡಿಎಸ್ ಭದ್ರಕೋಟೆಯನ್ನು ಛಿದ್ರ ಮಾಡುವ ಸಮಯ ಬಂದಿದೆ. ನಾವು ಈ ಅವಕಾಶವನ್ನು ಕಳೆದುಕೊಳ್ಳಬಾರದು’ ಎಂದು ಸುಮಲತಾ ಹೇಳಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ನಾಯಕರು ‘ಭಿಕ್ಷುಕರು’ ಇದ್ದಂತೆ : ಆರ್. ಅಶೋಕ್ ಟಾಂಗ್
ಡಿಕೆಶಿಗೆ ದೊಡ್ಡ ಆಘಾತ
ಚುನಾವಣೆಗೂ ಮುನ್ನವೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ತವರು ಜಿಲ್ಲೆಯಲ್ಲಿ ಆಘಾತ ಎದುರಾಗಿದೆ. ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಪ್ರಸನ್ನಗೌಡ ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ.
ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಸಿಗುವುದು ಅನುಮಾನವಾಗಿರುವ ಹಿನ್ನೆಲೆಯಲ್ಲಿ ಪ್ರಸನ್ನಗೌಡ ಕಾಂಗ್ರೆಸ್ ಪಕ್ಷ ಬಿಡಲು ತೀರ್ಮಾನಿಸಿದ್ದಾರೆ. ಇಂದು ಮೈಸೂರಿನಲ್ಲಿ ನಡೆಯಲಿರುವ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.