Monday, December 23, 2024

ಶಾಸಕ ಸ್ಥಾನಕ್ಕೆ ಶ್ರೀನಿವಾಸ್ ರಾಜೀನಾಮೆ : ಕುಮಾರಸ್ವಾಮಿ ಬಗ್ಗೆ ಅಚ್ಚರಿಕೆ ಹೇಳಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಹಾಲಿ ಶಾಸಕರು ತಮ್ಮ ಪಕ್ಷಗಳಿಗೆ ಶಾಕ್ ನೀಡುತ್ತಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಇಂದು ತಮ್ಮ ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

ಈ ಕುರಿತಂತೆ ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ನಾನು ಸ್ವಇಚ್ಚೆಯಿಂದ ರಾಜಿನಾಮೆ ನೀಡುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ. ಕೆಲವು ದಿನಗಳಿಂದ ಜೆಡಿಎಸ್ ಪಕ್ಷದ ಕುರಿತು ಅಸಮಾಧಾನಗೊಂಡಿದ್ದ ಶ್ರೀನಿವಾಸ್ ಪಕ್ಷ ತ್ಯಜಿಸುತ್ತಾರೆ ಎಂಬ ವದಂತಿಗಳು ಹರಿದಾಡಿದ್ದವು. ಅದಕ್ಕೆ ಪುಷ್ಠಿ ಕೊಡುವಂತೆ ಇಂದು ರಾಜೀನಾಮೆ ನೀಡಿದ್ದಾರೆ.

ಶೀಘ್ರ ಕಾಂಗ್ರೆಸ್ ಸೇರುವೆ

ಬಹಳ ನೋವಿನಿಂದ ಶಾಸಕ (ಎಂಎಲ್ಎ) ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಜೆಡಿಎಸ್ ಪಕ್ಷವನ್ನು ತೊರೆಯುತ್ತಿದ್ದೇನೆ. ನನ್ನ ರಾಜೀನಮೆ ಅಂಗೀಕಾರವಾದ ಬಳಿಕ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುತ್ತೇನೆ ಎಂದು ಎಸ್.ಆರ್ ಶ್ರೀನಿವಾಸ್ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ನನ್ನನ್ನು ಮಗನಂತೆ ನೊಡಿಕೊಂಡಿದ್ದರು. ತಮ್ಮ ಜೊತೆಗೆ ಚೆನ್ನಾಗಿಯೇ ಇದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಯಾವ ಕಾರಣಕ್ಕೆ ಪಕ್ಷದಿಂದ ಹೊರ ಹಾಕಿದರೋ ನನಗೆ ಗೊತ್ತಿಲ್ಲ. ಪಕ್ಷ ದ್ರೋಹ ಮಾಡದ ನಾನು ಅನಿವಾರ್ಯವಾಗಿ ಈಗ ಜೆಡಿಎಸ್ ಪಕ್ಷದಿಂದ ಹೊರಬಂದಿದ್ದೇನೆ ಎಂದು ಹೇಳಿದ್ದಾರೆ.

ಸಿ.ಡಿಗಳಿವೆ ಅಂತಾ ಹೆದರಿಸಿದ್ದಾರೆ

ಇನ್ನೊಂದೆಡೆ ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ್ ರಾಜೀನಾಮೆ ಕೊಟ್ಟಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ವ್ಯಂಗ್ಯವಾಡಿದ್ದಾರೆ. ನಾಳೆ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಹೋಗಲ್ಲ ಎನ್ನವುದು ಏನು ಗ್ಯಾರಂಟಿ? ಹಾಗೆಯೇ ವಲಸಿಗರಲ್ಲಿ ಕೆಲವರು ಬಿಜೆಪಿ ತೊರೆಯಲು ನಿರ್ಧರಿಸಿದ್ದರು. ಆದರೆ, ಸಿಡಿಗಳಿವೆ ಎಂದು ಅವರನ್ನು ಹೆದರಿಸಲಾಗಿದೆ ಎಂದು ಇಬ್ರಾಹಿಂ ಬಾಂಬ್ ಸಿಡಿಸಿದ್ದಾರೆ.

RELATED ARTICLES

Related Articles

TRENDING ARTICLES