ಬೆಂಗಳೂರು : ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಯಾವುದೇ ಕ್ಷಣದಲ್ಲಾದರೂ ಬಂಧನವಾಗುವ ಸಾಧ್ಯತೆಯಿದೆ. ಹೀಗಾಗಿ, ವಿರೂಪಾಕ್ಷಪ್ಪ ಮತ್ತೆ ನಾಪತ್ತೆ ಆಗಿದ್ದಾರೆ ಎನ್ನಲಾಗಿದೆ.
ಲೋಕಾಯುಕ್ತ ದಾಳಿ ವೇಳೆ ತಮ್ಮ ಮನೆಯಲ್ಲಿ ಭಾರೀ ನಗದು ಸಿಗುತ್ತಿದ್ದಂತೆಯೇ ಬಂಧನ ಭೀತಿಯಿಂದಾಗಿ ಮಾಡಾಳ್ ವಿರೂಪಾಕ್ಷಕ್ಕೆ ಎಸ್ಕೇಪ್ ಆಗಿದ್ದರು. ಇದೀಗ, ಮತ್ತೆ ಕಣ್ಣು ಮುಚ್ಚಾಲೆ ಆಟ ಶುರು ಮಾಡಿಕೊಂಡಿದ್ದಾರೆ.
ಭ್ರಷ್ಟಾಚಾರ ಪ್ರಕರಣ ಸಂಬಂಧ ಇಂದು ತಮ್ಮ ಜಾಮೀನು ಅರ್ಜಿ ವಜಾಗೊಂಡ ತಕ್ಷಣದಿಂದಲೇ ವಿರೂಪಾಕ್ಷಪ್ಪ ಮತ್ತೆ ಗಾಯಬ್ ಆಗಿದ್ದಾರೆ. ಯಾವುದೇ ಕ್ಷದಲ್ಲಾದರೂ ಮಾಡಾಳ್ ಬಂಧನವಾಗುವ ಸಾಧ್ಯತೆಯಿದೆ. ಈಗಾಗಿ ಅವರು ಅಜ್ಞಾನ ಸ್ಥಳ ಸೇರಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಕಸ್ಟಡಿಯಲ್ಲಿ ಮಾಡಾಳ್ ಪುತ್ರ
ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದರು. ನಂತರ ಅವರ ನಿವಾಸದ ಮೇಲೆಯೂ ದಾಳಿ ನಡೆಸಲಾಗಿತ್ತು. ಈ ಸಂಬಂಧ ಮಾಡಾಳ್ ಪುತ್ರ ಸೇರಿ ಐವರು ಆರೋಪಿಗಳು ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
ಪ್ರಕರಣ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠ ಮಾಡಾಳ್ ವಿರೂಪಾಕ್ಷಪ್ಪ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಇದೀಗ ಮಾಡಾಳ್ ವಿರೂಪಾಕ್ಷಪ್ಪ ಬೆಂಗಳೂರಿಗೆ ಬರುತ್ತಿದ್ದಾರೆ. ಲೋಕಾಯುಕ್ತ ಪೊಲೀಸರಿಗೆ ಶರಣಾಗಲಿದ್ದಾರೆ. ಪೊಲೀಸರು ಬಿಜೆಪಿ ಶಾಸಕರನ್ನು ಫಾಲೋ ಮಾಡುತ್ತಿದ್ದಾರೆ ಎಂಬಿತ್ಯಾದಿ ಸುದ್ದಿ ಹಬ್ಬಿದೆ.