Friday, November 22, 2024

ರಾಮ ಮಂದಿರ ನಿರ್ಮಾಣಕ್ಕೆ ಸರ್ಕಾರದಿಂದ 40 ಲಕ್ಷ ಬಿಡುಗಡೆ

ಬೆಂಗಳೂರು: ಚುನಾವಣೆ ಹೊತ್ತಿನಲ್ಲೇ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಹಲವು ಯೋಜನೆಗಳ ಘೋಷಣೆ, ಅನುದಾನ ಬಿಡುಗಡೆ ಹಾಗೂ ಹೊಸ ಹೊಸ ನಿಗಮ ಮಂಡಳಿಗಳ ರಚನೆಗೆ ಮುಂದಾಗಿದೆ. ಅದರಂತೆ, ಇದೀಗ ರಾಮ ಮಂದಿರ ನಿರ್ಮಾಣಕ್ಕೆ ಅನುದಾನ ಒದಗಿಸಿದೆ.

ಹೌದು, ಈ ವರ್ಷದ ಬಜೆಟ್ಟಿನಲ್ಲಿ ಘೋಷಿಸಿದ್ದಂತೆ, ರಾಮನಗರದ ರಾಮಗಿರಿಯಲ್ಲಿ ಭವ್ಯ ರಾಮ‌ಮಂದಿರ ನಿರ್ಮಾಣಕ್ಕೆ ಸರಕಾರ ಚಾಲನೆ ನೀಡಿದೆ. ಇದಕ್ಕಾಗಿ ಆರಂಭಿಕವಾಗಿ 40 ಲಕ್ಷ ರೂ.ಗಳನ್ನು ಒದಗಿಸಲಾಗಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ರಾಮದೇವರ ಬೆಟ್ಟದ ಸಮಗ್ರ ಅಭಿವೃದ್ಧಿ

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಮನಗರ ಜಿಲ್ಲೆಯ ಜನತೆಗೆ ಇದು ರಾಮನವಮಿಯ ಉಡುಗೊರೆ ಆಗಿದೆ. ಒಂದೆರೆಡು ವರ್ಷಗಳಲ್ಲಿ ರಾಮದೇವರ ಬೆಟ್ಟದ ಸಮಗ್ರ ಅಭಿವೃದ್ಧಿ ಆಗಲಿದ್ದು, ಇದು ದಕ್ಷಿಣದ ಅಯೋಧ್ಯೆಯಾಗಲಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಜಿಲ್ಲಾ ಸಚಿವರ ನೇತೃತ್ವದಲ್ಲಿ ರಾಮನಗರದ ಭಕ್ತರ ಗುಂಪು ಅಯೋಧ್ಯೆಗೆ ಭೇಟಿ ನೀಡಿತ್ತು. ಆ ಸಂದರ್ಭದಲ್ಲಿ ಅಲ್ಲಿನ ರಾಮ ಮಂದಿರಕ್ಕೆ ಬೆಳ್ಳಿಯ ಇಟ್ಟಿಗೆ, ರೇಷ್ಮೆ ಸೀರೆ ಮತ್ತು ವಸ್ತ್ರವನ್ನು ಕಾಣಿಕೆಯಾಗಿ ಅರ್ಪಿಸಲಾಗಿತ್ತು.

ಸದ್ಯ, ಪ್ರಾರಂಭಿಕವಾಗಿ 40 ಲಕ್ಷ ರೂ.ಗಳನ್ನು ಸರ್ಕಾರ ಒದಗಿಸಿದೆ. ಕೆಲ ದಿನಗಳಲ್ಲೇ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಪ್ಲಾನ್ ಅಂತಿಮವಾಗಲಿದೆ.

RELATED ARTICLES

Related Articles

TRENDING ARTICLES