Wednesday, January 22, 2025

ಅರುಣ್ ಸೋಮಣ್ಣ ವಿರುದ್ಧ ‘ಗೋಬ್ಯಾಕ್’ ಅಭಿಯಾನ

ಬೆಂಗಳೂರು : ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದ ವಸತಿ ಸಚಿವ ವಿ.ಸೋಮಣ್ಣ ಅವರ ಪುತ್ರ ಡಾ.ಅರುಣ್ ಸೋಮಣ್ಣ ಅವರಿಗೆ ತುಮಕೂರು ಜಿಲ್ಲಾ ಘಟಕದ ಉಪಾಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಕಾರ್ಯಕರ್ತರಿಂದ ಅಸಮಾಧಾನ ವ್ಯಕ್ತವಾಗಿದೆ.

ತುಮಕೂರು ಜಿಲ್ಲೆಯಲ್ಲಿ ಮುಖಂಡರ ಕೊರತೆಗೆ ಬೆಂಗಳೂರಿನಿಂದ ಆಮದು ಮಾಡಿಕೊಳ್ಳುತ್ತಿರುವ ಅರುಣ್ ಸೋಮಣ್ಣ ಅವರಿಗೆ ಸ್ವಾತಗ ಎಂದು ಬಿಜೆಪಿ ಕಾರ್ಯಕರ್ತರು ವ್ಯಂಗ್ಯವಾಡಿದ್ದಾರೆ.

ಶಾಸಕರು, ಸಂಸದರ ಗೆಲುವಿಗೆ ಸಾಮಾನ್ಯ ಕಾರ್ಯಕರ್ತರು ಅವಿರತವಾಗಿ ಶ್ರಮಿಸಿದ್ದಾರೆ. ಬೇರೆ ಜಿಲ್ಲೆಯವರಿಗೆ ಬಿಜೆಪಿ ಘಟಕದ ಉಪಾಧ್ಯಕ್ಷ ಸ್ಥಾನ ನೀಡಿದ್ದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಹೀಗಾಗಿ, ‘ಗೋಬ್ಯಾಕ್ ಅರುಣ್ ಸೋಮಣ್ಣ.. ಗೋಬ್ಯಾಕ್ ಅರುಣ್ ಸೋಮಣ್ಣ ಅಭಿಯಾನ ಪ್ರಾರಂಭ ಮಾಡಿದ್ದಾರೆ.

ಸಮರ್ಥ ನಾಯಕರಿಲ್ವಾ?

ನಿನ್ನೆಯಷ್ಟೇ ತುಮಕೂರು ಜಿಲ್ಲಾ ಉಪಾಧ್ಯಕ್ಷರಾಗಿ ಅರುಣ್ ಸೋಮಣ್ಣ ನೇಮಕವಾಗಿದ್ದಾರೆ. ಹೀಗಾಗಿ, ಜಿಲ್ಲೆಯಲ್ಲಿ ಸಮರ್ಥ ನಾಯಕರಿಲ್ವಾ ಎಂದು ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಕಾರ್ಯಕರ್ತರಿಂದ ಫೇಸ್​ಬುಕ್​ನಲ್ಲಿ ಗೋ ಬ್ಯಾಕ್ ಅಭಿಯಾನ ಶುರುವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿ.ವೈ ವಿಜಯೇಂದ್ರಗೆ ಬೈದ್ರು ಉನ್ನತ ಅಧಿಕಾರ ನೀಡಲಾಗಿದೆ ಎಂದು ಲೇವಡಿ ಮಾಡಿದ್ದಾರೆ.

ನಮ್ಮ ಜಿಲ್ಲೆಗೆ ಅರುಣ್ ಸೋಮಣ್ಣ ಬೇಡ ಎಂದು ಮನವಿ ಮಾಡಿರುವ ಕಾರ್ಯಕರ್ತರು, ಜಿಲ್ಲೆಯಲ್ಲಿ ನಾಯಕರ ಕೊರತೆ ಇಲ್ಲ. ಪಕ್ಷಕ್ಕಾಗಿ ದುಡಿದವರು ಚಪ್ಪಾಳೆ ಹೊಡೆಯಿರಿ ಎಂದು ಕಾರ್ಯಕರ್ತರು ಪೋಸ್ಟ್ ಮಾಡಿದ್ದಾರೆ.

 

RELATED ARTICLES

Related Articles

TRENDING ARTICLES