Friday, March 29, 2024

ಅಂಚೆ ಮತದಾನ ಮಾಡಲು ಯಾರು ಅರ್ಹರು? ಪತ್ರಕರ್ತರಿಗೂ ಇದೆ ಅವಕಾಶ

ಬೆಂಗಳೂರು : ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲೇ ಮತದಾನ ನಡೆಯಲಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ರಿಸಲ್ಟ್ ಅನೌನ್ಸ್ ಆಗಲಿದೆ. ಕೇಂದ್ರ ಚುನಾವಣೆ ಆಯೋಗವು ಇದೇ ಮೊದಲ ಬಾರಿಗೆ ಕೆಲವರಿಗೆ ಅಂಚೆ ಮತದಾನ ಮಾಡುವ ಅವಕಾಶ ಮಾಡಿಕೊಟ್ಟಿದೆ.

ಹೌದು, ಮಾಧ್ಯಮ ಸಂಸ್ಥೆಗಳ ಶಿಫಾರಸಿನ ಆಧಾರದ ಮೇಲೆ ಚುನಾವಣಾ ಆಯೋಗವು ಮಾನ್ಯತಾ ಕಾರ್ಡ್ ವಿತರಿಸಲಿದೆ. ಕಾರ್ಡ್ ಹೊಂದಿರುವ ಪತ್ರಕರ್ತರು ಮಾತ್ರವೇ ಅಂಚೆ ಮತದಾನ ಮಾಡಬಹುದು.

ಇನ್ನೂ, ಕಾರ್ಯನಿರತ ಸಿಬ್ಬಂದಿಗೆ ಅವಕಾಶವಿರುವುದಿಲ್ಲವೆಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸ್ಪಷ್ಟಪಡಿಸಿದ್ದಾರೆ. ವಿಕಲಚೇತನರು ಮನೆಯಲ್ಲೇ ಮತ ಚಲಾಯಿಸಬಹುದು. ಈ ವೇಳೆ ಚುನಾವಣಾ ಕರ್ತವ್ಯದಲ್ಲಿರುವ ಸಿಬ್ಬಂದಿ ಜೊತೆ ಪಕ್ಷಗಳ ವೀಕ್ಷಕರೂ ತೆರಳಬಹುದು. ಮತದಾನದ ಗೌಪ್ಯತೆ ಕಾಪಾಡಲಾಗುತ್ತದೆ ಎಂದು ಹೇಳಿದ್ದಾರೆ.

ಮನೆಯಿಂದಲೇ ಗೌಪ್ಯ ಮತದಾನ

ಚುನಾವಣೆಯಲ್ಲಿ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ಹಾಸಿಗೆ ಬಿಟ್ಟು ಏಳಲಾಗದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶ ನೀಡಲಾಗಿದೆ. ಈ ಮೂಲಕ ಈ ಬಾರಿ ರಾಜ್ಯದಲ್ಲಿ ಅತಿ ಹಿರಿಯ ಮತದಾರರಿಗೆ ಅನುಕೂಲವಾಗುವಂತೆ ಹೊಸ ಪ್ರಯೋಗ ಮಾಡುತ್ತಿದೆ. ಇದೇ ಮೊದಲ ಬಾರಿಗೆ ನಾವು ಕರ್ನಾಟಕದಲ್ಲಿ 80 ವರ್ಷಕ್ಕೂ ಮೇಲ್ಪಟ್ಟ ಮತ್ತು ಅಂಗವಿಕಲರು (ಪಿಡಬ್ಲ್ಯೂಡಿ) ಮತದಾರರು ಮನೆಗಳಿಂದಲೂ ಮತದಾನ ಮಾಡುವ ಸೌಲಭ್ಯ ಮಾಡಿಕೊಡಲಾಗಿದೆ.

ಎಲ್ಲರೂ ಮತದಾನ ಮಾಡಬೇಕು

ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ.

ವೃದ್ದರು, ವಿಶೇಷ ಚೇತನರ ಸಂಖ್ಯೆ ಎಷ್ಟು?

ರಾಜ್ಯದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದು, ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರ ಸಂಖ್ಯೆ 12,15,763 ಇದೆ. 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. ಇನ್ನು ಕರ್ನಾಟಕದಲ್ಲಿ 5.55 ಲಕ್ಷ ವಿಶೇಷ ಚೇತನ(ವಿಕಲಚೇತನ) ಮತದಾರರರು ಇದ್ದಾರೆ. ಇವರೆಲ್ಲರಿಗೂ ಮನೆಯಿಂದ ಮತದಾನ ಮಾಡುವ ಅವಕಾಶ ನೀಡಲಾಗಿದೆ.

RELATED ARTICLES

Related Articles

TRENDING ARTICLES