ಬೆಂಗಳೂರು : ಶಾಸಕತ್ವದಿಂದ ಅನರ್ಹಗೊಂಡಿದ್ದ ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ ಗೌರಿಶಂಕರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ತುಮಕೂರು ಗ್ರಾಮಾಂತರ ಕ್ಷೇತ್ರದ ಮತದಾರರಿಗೆ ನಕಲಿ ಬಾಂಡ್ ಹಂಚಿಕೆ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಗೌರಿಶಂಕರ್ ಅವರು ಶಾಸಕ ಸ್ಥಾನದಿಂದಲೇ ಅನರ್ಹಗೊಂಡಿದ್ದರು. ಈ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ಆದೇಶ ನೀಡಿತ್ತು.
ತುಮಕೂರು ಗ್ರಾಮಾಂತರದ ಬಿಜೆಪಿ ಮಾಜಿ ಶಾಸಕ ಹಾಗೂ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಜೆಡಿಎಸ್ ಶಾಸಕ ಶಾಸಕ ಈ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಆದೇಶದ ವಿರುದ್ಧ ಶಾಸಕ ಗೌರಿಶಂಕರ್ ಮೇಲ್ಮನವಿ ಸಲ್ಲಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶಕ್ಕೆ ತಡೆ ನೀಡಿದೆ.
ಆದೇಶಕ್ಕೆ ತಡೆ ನೀಡುವಂತೆ ಮನವಿ
ಈ ಹಿನ್ನೆಲೆ, ಒಂದು ತಿಂಗಳ ಕಾಲ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿದ್ದು, ಗೌರಿಶಂಕರ್‌ಗೆ ರಿಲೀಫ್ ಸಿಕ್ಕಿದೆ. ಆದರೆ, ಹೈಕೋರ್ಟ್ ಏಕಸದ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ಒಂದು ತಿಂಗಳ ಕಾಲ ರಿಲೀಫ್ ನೀಡಿದೆ. ಆದೇಶಕ್ಕೆ ತಡೆ ನೀಡುವಂತೆ ಗೌರಿ ಶಂಕರ್ ಪರ ವಕೀಲರು ಮನವಿ ಮಾಡಿಕೊಂಡಿದ್ದರು.
ಈಗಾಗಲೇ ಚುನಾವಣೆ ದಿನಾಂಕ ಘೋಷಣೆ ಆಗಿದೆ. ಈ ಹಿನ್ನೆಲೆ, ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡುವಂತೆ ಮನವಿ ಮಾಡಿದ್ದರು. ಈ ವಾದ ಆಲಿಸಿದ ನ್ಯಾಯಪೀಠ, ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡಿದೆ.