Wednesday, January 22, 2025

ವರಿಷ್ಠರಿಗೂ ಮೊದಲೇ ವಿಜಯೇಂದ್ರ ಕ್ಷೇತ್ರ ಘೋಷಿಸಿದ ಯಡಿಯೂರಪ್ಪ

ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪುತ್ರ ಬಿ.ವೈ ವಿಜಯೇಂದ್ರ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂಬ ಒತ್ತಡ ಕೇಳಿಬರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಯಡಿಯೂರಪ್ಪ, ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ವರುಣಾದಿಂದಲೇ ವಿಜಯೇಂದ್ರ ಸ್ಪರ್ಧೆಗೆ ಒತ್ತಡವಿದೆ. ಆದರೆ, ವರುಣಾದಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಮೂಲಕ ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಎಲ್ಲಿ ಸ್ಪರ್ಧಿಸಬೇಕು ಎಂಬ ಬಗ್ಗೆ ನಿರ್ಧರಿಸುವ ಮೊದಲೇ ಪುತ್ರನ ಕ್ಷೇತ್ರವನ್ನು ಘೋಷಣೆ ಮಾಡಿದ್ದಾರೆ. ಆ ಮೂಲಕ ವಿಜಯೇಂದ್ರ ಶಿಕಾರಿಪುರದಿಂದ ಕಣಕ್ಕಿಳಿಯುವುದು ಅಂತಿಮವಾಗಿದೆ.

ಬಿಎಸ್ ವೈ ಹೇಳಿಕೆ ಬಗ್ಗೆ ಗೊತ್ತಿಲ್ಲ : ವಿಜಯೇಂದ್ರ

ಇನ್ನೂ ವರುಣಾದಿಂದ ಕಣ್ಣಕ್ಕಿಳಿಯುವ ಕುರಿತು ಪ್ರತಿಕ್ರಿಯಿಸಿರುವ ಬಿ.ವೈ ವಿಜಯೇಂದ್ರ, ಹೈಕಮಾಂಡ್‌ನತ್ತ ಬೊಟ್ಟು ಮಾಡಿ ಜಾರಿಕೊಂಡಿದ್ದಾರೆ. ನಾನು ವೈಯಕ್ತಿಕ ಅಭಿಪ್ರಾಯ ಏನೂ ಇಲ್ಲ. ನನ್ನ ಮನಸ್ಸಿನಲ್ಲಿ ಏನೂ ಇಲ್ಲ. ಯಡಿಯೂರಪ್ಪ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಯಡಿಯೂರಪ್ಪ, ರಾಘವೇಂದ್ರ, ವಿಜಯೇಂದ್ರ ತೀರ್ಮಾನ ಮಾಡಲ್ಲ. ಹೈಕಮಾಂಡ್ ನಾಯಕರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ವರುಣ ಬಗ್ಗೆ ಕೇಳಲಾದ ಬಹುತೇಕ ಪ್ರಶ್ನೆಗಳಿಗೆ ಶಿಕಾರಿಪುರ ಉಲ್ಲೇಖಿಸಿ ವಿಜಯೇಂದ್ರ ಉತ್ತರಿಸಿದ್ದಾರೆ.

RELATED ARTICLES

Related Articles

TRENDING ARTICLES