Wednesday, January 22, 2025

18 ಶಾಸಕರನ್ನು ಕರೆದ್ಕೊಂಡು ಹೋದ್ರಲ್ವಾ? ಆಗ ಎಲ್ಲಿ ಹೋಗಿತ್ತು ನೈತಿಕತೆ : ಡಿಕೆಶಿ ಕಿಡಿ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಬಿಜೆಪಿಯ ಹಲವು ಶಾಸಕರಿಗೆ ಕರೆ ಮಾಡಿ ಪಕ್ಷಕ್ಕೆ ಆಹ್ವಾನಿಸಿದ್ದಾರೆ ಎಂಬ ಹೇಳಿಕೆಗೆ ಡಿಕೆಶಿ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿಕೆಶಿ, ಬಿಜೆಪಿಯವರು 18 ಶಾಸಕರನ್ನು ಕರೆದುಕೊಂಡು ಹೋದರಲ್ಲಾ ಆಗ ಸಿಎಂ ಬೊಮ್ಮಾಯಿ ಅವರ ನೈತಿಕತೆ ಎಲ್ಲಿಗೆ ಹೋಗಿತ್ತು? ಎಂದು ಫುಲ್ ಗರಂ ಆಗಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾನು ಬಿಜೆಪಿ ಶಾಸಕರಿಗೆ ಕರೆ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡುತ್ತಿರುವುದಾಗಿ ಹೇಳಿದ್ದಾರೆ. ಆಪರೇಷನ್ ಕಮಲ ಮಾಡಿ ಅಧಿಕಾರ ಅನುಭವಿಸಿದವರಿಗೆ ಈಗ ಮಾತನಾಡಲು ಯಾವ ನೈತಿಕತೆ ಇದೆ? ಎಂದು ಟಾಂಗ್ ಕೊಟ್ಟಿದ್ದಾರೆ.

ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿದ್ದು, ಮೇ 10ರ ದಿನ ಕರ್ನಾಟಕವನ್ನು ಅಭಿವೃದ್ಧಿ ರಾಜ್ಯವನ್ನಾಗಿ ನಿರ್ಮಾಣ ಮಾಡುವ, ಭ್ರಷ್ಟಾಚಾರವನ್ನು ಬಡಿದೋಡಿಸುವಂತಹ ದಿನ. ಅದು ಈ ರಾಜ್ಯದ ಹಾಗೂ ಮತದಾರರ ತಮ್ಮ ಭವಿಷ್ಯವನ್ನ ತಾವೇ ತೀರ್ಮಾನಿಸುವ ದಿನ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿ ಶಾಸಕರು ಪಕ್ಷ ಸೇರುತ್ತಾರೆ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಹಾಲಿ-ಮಾಜಿ ಶಾಸಕರು, ಪರಿಷತ್ ಸದಸ್ಯರು ಸೇರಿ ಅನೇಕರು ಸೇರುತ್ತಿದ್ದಾರೆ. ಬಿಜೆಪಿ ಸರ್ಕಾರ ರಾಜ್ಯದ ಇಡೀ ವ್ಯವಸ್ಥೆಯನ್ನೇ ಭ್ರಷ್ಟಗೊಳಿಸಿದ್ದು, ಇದರ ಬದಲಾವಣೆ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂದು ಮನಗೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಸೂಚನೆಗಳು ಸ್ಪಷ್ಟವಾಗಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಆರ್ಥಿಕವಾಗಿ ದಿವಾಳಿಯಾಗುತ್ತಿರುವ ರಾಜ್ಯವನ್ನು ಉಳಿಸಲು ಸಾಧ್ಯ. ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡಲು, ಜನಪರವಾದ ಆಡಳಿತ ನೀಡಲು, ನುಡಿದಂತೆ ನಡೆಯಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎನ್ನುವುದು ಜನರಿಗೆ ಮನವರಿಕೆ ಆಗಿದೆ. ಜನರು ಬದಲಾವಣೆ ಬಯಸುತ್ತಿದ್ದು ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

RELATED ARTICLES

Related Articles

TRENDING ARTICLES