Friday, December 27, 2024

ಸಿದ್ರಾಮಯ್ಯ 224 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿ : ಪ್ರಲ್ಹಾದ್ ಜೋಶಿ ಲೇವಡಿ

ಬೆಂಗಳೂರು : ವರುಣಾ ಕ್ಷೇತ್ರದಿಂದ ಕಣಕ್ಕಿಳಿಯುವುದು ಕನ್ಫರ್ಮ್ ಆದರೂ ಸೋಲಿನ ಭೀತಿಯಿಂದ ಮತ್ತೊಂದು ಕ್ಷೇತ್ರವನ್ನು ಹುಡುಕಾಡುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ಕೊಟ್ಟಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸಿರುವ ಸಿದ್ದರಾಮಯ್ಯ ಅವರಿಗೆ ಇನ್ನೂ ಕ್ಷೇತ್ರವೇ ಸಿಕ್ಕಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅವರು 224 ಕ್ಷೇತ್ರಗಳಿಂದಲೂ ಸ್ಪರ್ಧಿಸಲಿ ಎಂದು ಜೋಶಿ ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳುತ್ತಿದ್ದಾರೆ. ಅಪ್ಪನಿಗಾಗಿ ಮಗ ದೊಡ್ಡ ತ್ಯಾಗ ಮಾಡಿದ ರೀತಿ ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ, ವರುಣಾದಲ್ಲಿ ಸೋಲುತ್ತೇನೆ ಎನ್ನುವ ಭಯದಿಂದಾಗಿ ಸಿದ್ದರಾಮಯ್ಯ ಮತ್ತೊಂದು ಕ್ಷೇತ್ರದಿಂದ ಸ್ಪರ್ಧೆಗೆ ಮುಂದಾಗಿದ್ದಾರೆ ಎಂದು ಟೀಕಿಸಿದ್ದಾರೆ.

ನಮ್ಮದು ಪರಿವಾರದ ಪಕ್ಷವಲ್ಲ

ಇನ್ನು ಕಾಂಗ್ರೆಸ್ ರೀತಿ ನಮ್ಮದು ಪರಿವಾರದ ಪಕ್ಷವಲ್ಲ. ಡೆಮಾಕ್ರೆಟಿಕ್‌ ಪಕ್ಷವಾದ ನಮ್ಮಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಸೂಕ್ತ ಅಭ್ಯರ್ಥಿಗೆ ಟಿಕೆಟ್ ಕೊಡುತ್ತೇವೆ. ಅದಕ್ಕಾಗಿಯೇ ಇಂದು ಅಭಿಪ್ರಾಯ ಸಂಗ್ರಹ ಸಭೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಟಿಕೆಟ್ ಕುರಿತು ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಣ್‌ ಸವದಿ ಇಬ್ಬರಿಗೂ ಬಹಿರಂಗವಾಗಿ ಮಾತಾಡದಂತೆ ಈಗಾಗಲೇ ತಾಕೀತು ಮಾಡಿದ್ದೇವೆ.‌ ಎಲ್ಲವನ್ನೂ ಗಮನಿಸುತ್ತಿದ್ದೇವೆ. ಬೆಳಗಾವಿಯಲ್ಲಿ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಪ್ರಲ್ಹಾದ್‌ ಜೋಶಿ ಸ್ಪಷ್ಟನೆ ಕೊಟ್ಟಿದ್ದಾರೆ.

RELATED ARTICLES

Related Articles

TRENDING ARTICLES