Friday, November 22, 2024

ಕೊರೊನಾ ಸ್ಫೋಟ : ಒಂದೇ ದಿನ 2,994 ಪ್ರಕರಣ, ಮೃತರ ಸಂಖ್ಯೆ ಎಷ್ಟು ಗೊತ್ತಾ?

ಬೆಂಗಳೂರು : ದೇಶದಲ್ಲಿ ಕೊರೊನಾ ಸೋಂಕಿನ ಅಬ್ಬರ ಸೈಲೆಂಟ್ ಆಗಿಯೇ ಹೆಚ್ಚಾಗುತ್ತಿದೆ. ಚಿಕಿತ್ಸೆಗಾಗಿ ಚಿಕಿತ್ಸೆಗೆ ದಾಖಲಾಗುತ್ತಿರುವವರ ಸಂಖ್ಯೆ ಜೊತೆ, ಮೃತರ ಸಂಖ್ಯೆ ಏರಿಕೆಯಾಗಿದೆ.

24 ಗಂಟೆಗಳಲ್ಲಿ ದೇಶದಲ್ಲಿ ಕೊವಿಡ್ ದೃಢಪಟ್ಟ 2,994 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 16,354ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ಮೂಲಕ ಈವರೆಗಿನ ಕೊವಿಡ್ ಸೋಂಕಿತರ ಒಟ್ಟು ಸಂಖ್ಯೆ 4.47 ಕೋಟಿಯಾಗಿದೆ. 24 ಗಂಟೆಗಳಲ್ಲಿ ಕೊವಿಡ್‌ನಿಂದ 9 ಮಂದಿ ಮೃತಪಟ್ಟಿದ್ದು, ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,876ಕ್ಕೆ ಏರಿದೆ ಎಂದು ತಿಳಿದುಬಂದಿದೆ.

ಕರ್ನಾಟಕದಲ್ಲಿ ಎರಡು ಸಾವು

ದೆಹಲಿ, ಕರ್ನಾಟಕ, ಕೇರಳ ಮತ್ತು ಪಂಜಾಬ್‌ನಲ್ಲಿ ತಲಾ ಇಬ್ಬರು ಮೃತಪಟ್ಟಿದ್ದು, ಗುಜರಾತ್‌ನಲ್ಲಿ ಒಬ್ಬರು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇಕಡ 0.04ರಷ್ಟು ಸಕ್ರಿಯ ಪ್ರಕರಣಗಳಿವೆ.

ರಾಷ್ಟ್ರೀಯ ಕೊವಿಡ್ ಚೇತರಿಕೆ ದರ ಶೇಕಡ 98.77 ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇಕಡ 2.09ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 2.03ರಷ್ಟಾಗಿದೆ.

RELATED ARTICLES

Related Articles

TRENDING ARTICLES