Monday, December 23, 2024

116 ಮಕ್ಕಳಿಗೆ ‘ಶಿವಕುಮಾರ ಶ್ರೀಗಳ’ ಹೆಸರು ನಾಮಕರಣ

ಬೆಂಗಳೂರು : ತುಮಕೂರಿನ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ 116ನೇ ಜಯಂತಿ ಹಿನ್ನೆಲೆಯಲ್ಲಿ  116 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರನ್ನು ನಾಮಕರಣ ಮಾಡಲಾಯಿತು. ನಾಮಕರಣ ಮಾಡಲು ಮುಂಚಿತವಾಗಿಯೇ ಪೋಷಕರು ಹೆಸರು ನೋಂದಾಯಿಸಿದ್ದರು.

ಹೌದು, ನಾಡಿನ ಪ್ರಸಿದ್ದ ಮಠಗಳಲ್ಲಿ ಒಂದಾದ ತುಮಕೂರು ಸಿದ್ಧಗಂಗಾ ಮಠದಲ್ಲಿ ಲಕ್ಷಾಂತರ ಮಕ್ಕಳಿಗೆ ಆಶ್ರಯ, ಅನ್ನ, ಅಕ್ಷರ ನೀಡಿದ ನಡೆದಾಡುವ ದೇವರು ಎಂದೇ ಪ್ರಸಿದ್ದವಾಗಿದ್ದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ 116ನೇ ಜನ್ಮದಿನವನ್ನು ಆಚರಿಸಲಾಗುತ್ತಿದೆ.

ಬೆಳಗ್ಗೆಯಿಂದಲೇ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗುತ್ತಿದೆ. ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ಕೂಡ ನೇರವೇರಿತು.

ರಾಜ್ಯಪಾಲರು ಗೆಲ್ಹೋಟ್ ಭಾಗಿ

ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆ ರಾಜಕಾರಣಿಗಳು, ಜನಪ್ರತಿನಿಧಿಗಳು ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿಲ್ಲ. ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಪ್ರಭಾಕರ್ ಕೋರೆ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತಿರಿದ್ದರು.

ಸಿದ್ದಗಂಗಾ ಮಠಾಧ್ಯಕ್ಷ‌ ಸಿದ್ದಲಿಂಗ ಸ್ವಾಮಿಜಿ, ಸುತ್ತೂರು ಶ್ರೀಗಳ ಸಾನಿಧ್ಯದಲ್ಲಿ ಅನೇಕ ಧಾರ್ಮಿಕ ಕಾರ್ಯಗಳು ನೇರವೇರಿದವು. ಶಿವಕುಮಾರ ಶ್ರೀಗಳ ಗದ್ದಿಗೆ, ಮಠದ ಆವರಣಗಳನ್ನು ಫಲಪುಷ್ಪಗಳಿಂದ ವಿಶೇಷವಾಗಿ ಅಲಂಕಾರ. ಸಾವಿರಾರು ಭಕ್ತರು ಮಠಕ್ಕೆ ಆಗಮನ ನಿರೀಕ್ಷೆಯಿದ್ದು, ಬರುವ ಭಕ್ತರಿಗೆ ಮಠದಲ್ಲಿ ಊಟದ ವ್ಯವಸ್ಥೆ‌ ಮಾಡಲಾಗಿದೆ.

RELATED ARTICLES

Related Articles

TRENDING ARTICLES