Thursday, April 25, 2024

ನಾಳೆ ಆರ್​ಸಿಬಿ ಪಂದ್ಯ : ವಾಹನ ಪಾರ್ಕಿಂಗ್ ಎಲ್ಲಿ? ತಪ್ಪದೇ ಈ ಸುದ್ದಿ ಓದಿ

ಬೆಂಗಳೂರು : ನಾಳೆ ಆರ್​ಸಿಬಿ ಮತ್ತು ಮುಂಬೈ ಇಂಡಿಯನ್ಸ್ ಮಧ್ಯೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಹಲವು ಸ್ಥಳಗಳಲ್ಲಿ ವಾಹನ ನಿಲುಗಡೆ (ಪಾರ್ಕಿಂಗ್) ನಿಷೇಧಿಸಲಾಗಿದೆ.

ಹೌದು, ಆರ್ ಸಿಬಿ ಮ್ಯಾಚ್ ಟಿಕೆಟ್ ಗಾಗಿ ನಿನ್ನೆ ಕ್ರೀಡಾಂಗಣದ ಬಳಿ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ಇಂದು (ಶನಿವಾರ) ಸಹ ಸಂಚಾರ ದಟ್ಟಣೆ ಉಂಟಾಗಿದೆ. ಹೀಗಾಗಿ, ನಾಳಿನ ಪಂದ್ಯದ ವೇಳೆ ಹೆಚ್ಚು ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆಯಿದೆ.

ಸಂಚಾರ ದಟ್ಟಣೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ವಾಹನ ನಿಲುಗಡೆಗೆ ಸಂಬಂಧಿಸಿ ಪ್ರಕಟಣೆ ಹೊರಡಿಸಿದ್ದಾರೆ. ಏಪ್ರಿಲ್ 2ರಂದು ಸಂಜೆ 4ರಿಂದ ರಾತ್ರಿ 11 ಗಂಟೆವರೆಗೆ ಕೆಲವು ಪ್ರದೇಶಗಳಲ್ಲಿ ಪಾರ್ಕಿಂಗ್ ನಿಷೇಧಿಸಿದ್ದಾರೆ.

ಈ ಸ್ಥಳಗಳಲ್ಲಿ ಪಾರ್ಕಿಂಗ್ ನಿಷೇಧ

ಚಿನ್ನಸ್ವಾಮಿ ಕ್ರೀಡಾಂಗಣ ಸಮೀಪದ ಕ್ವೀನ್ಸ್ ರಸ್ತೆ, ಎಂ.ಜಿ ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಸೇಂಟ್ ಮಾರ್ಕ್ಸ್​ ರೋಡ್, ಮ್ಯೂಸಿಯಂ ರೋಡ್, ಕಸ್ತೂರ್ಬಾ ರಸ್ತೆ, ಅಂಬೇಡದ್ಕರ್ ವೀದಿ ರಸ್ತೆ, ಟ್ರಿನಿಟಿ ಜಂಕ್ಷನ್, ಲ್ಯಾವೆಲ್ಲೆ ರೋಡ್‌, ವಿಟ್ಟಲ್ ಮಲ್ಯ ರಸ್ತೆ ಹಾಗೂ ನೃಪತುಂಗ ರಸ್ತೆಯ ಸುತ್ತಮುತ್ತ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಇಲ್ಲಿ ಮಾತ್ರ ಪಾರ್ಕಿಂಗ್​ ಮಾಡಬೇಕು

ಇನ್ನೂ ,ಕಿಂಗ್ಸ್ ರಸ್ತೆ, ಯುಬಿ ಸಿಟಿ ಪಾರ್ಕಿಂಗ್ ಪ್ರದೇಶ, ಬಿಎಂಟಿಸಿ ಟಿಟಿಂಸಿ ಶಿವಾಜಿನಗರ ಮೊದಲ ಮಹಡಿ, ಹಳೆ ಕೆಜಿಐಡಿ ಕಟ್ಟಡ, ಕಂಠೀರವ ಸ್ಟೇಡಿಯಂ, ಬಿಆರ್​ವಿ ಗ್ರೌಂಡ್ ಬಳಿ ಪಾರ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಮಧ್ಯರಾತ್ರಿ 1ರವೆಗೆ ಮೆಟ್ರೋ ಸಂಚಾರ

ಇನ್ನೂ ಏಪ್ರಿಲ್ 2, 10, 17, 26 ಮೇ 21 ರಂದು ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಯಲಿದೆ. ಹೀಗಾಗಿ, ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ರೈಲು ಸಂಚಾರಕ್ಕೆ ಬಿಎಂಆರ್​ಸಿಎಲ್ ಅವಕಾಶ ಮಾಡಿಕೊಟ್ಟಿದೆ.

RELATED ARTICLES

Related Articles

TRENDING ARTICLES