Sunday, December 22, 2024

ಇಂದೇ ಫೈನಲ್ : ರೇವಣ್ಣ ಪತ್ನಿ ಭವಾನಿಗೆ ಹಾಸನ ಟಿಕೆಟ್ ಫಿಕ್ಸ್?

ಬೆಂಗಳೂರು : ಹಾಸನ ಟಿಕೆಟ್ ಕಾಳಗ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಎಚ್.ಡಿ.ರೇವಣ್ಣ ಅವರ ಜೊತೆ ಮಾತನಾಡಿ ಸಂಧಾನ ಮಾಡಲಿದ್ದಾರೆ.

ಸೋಮವಾರ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಲಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ದಂಪತಿ ಕೊನೆ ಕ್ಷಣದ ಕಸರತ್ತನ್ನು ನಡೆಸುತ್ತಿದ್ದಾರೆ.

ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿಯಾಗಿ ಅವರ ಮನವೊಲಿಸುವ ಸಲುವಾಗಿ ರೇವಣ್ಣ ಹಾಗೂ ಅವರ ಪತ್ನಿ ಭವಾನಿ ರೇವಣ್ಣ ಭಾನುವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಮೂಲಕ ಕಟ್ಟ ಕಡೆಯ ಪ್ರಯತ್ನಕ್ಕೆ ರೇವಣ್ಣ ದಂಪತಿ ಮುಂದಾಗಿದ್ದಾರೆ.

ನಾಳೆ ಹಾಸನ ಟಿಕೆಟ್ ಘೋಷಣೆ

ಸೋಮವಾರ ಎರಡನೇ ಪಟ್ಟಿ ಬಿಡುಗಡೆ ಎಂದು ಎಚ್.ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ದೇವೇಗೌಡರು ಕುಮಾರಸ್ವಾಮು ಹಾಗೂ ರೇವಣ್ಣ ಅವರೊಂದಿಗೆ ಮಾತುಕತೆ ನಡೆಸಿ ಸಂಧಾನ ಮಾಡುವ ಸಾಧ್ಯತೆಯಿದೆ. ಇಬ್ಬರೂ ಒಮ್ಮತಕ್ಕೆ ಬಂದಲ್ಲಿ ನಾಳೆ ಹಾಸನ ಟಿಕೆಟ್ ಘೋಷಣೆಯಾಗುವ ಸಾಧ್ಯತೆಯಿದೆ.

ಇತ್ತ, ರೇವಣ್ಣ ತಮ್ಮ ಪತ್ನಿ ಭವಾನಿಗೆ ಟಿಕೆಟ್ ಕೊಡಿಸುವ ಪ್ರಯತ್ನ ನಡೆಸುತ್ತಿದ್ದರೆ ಮತ್ತೊಂದೆಡೆ, ಕುಮಾರಸ್ವಾಮಿ ಎಚ್.ಪಿ. ಸ್ವರೂಪ್ ಬೆನ್ನಿಗೆ ನಿಂತಿದ್ದಾರೆ. ಇತ್ತೀಚೆಗೆ ಹಾಸನ ಟಿಕೆಟ್ ವಿಚಾರವಾಗಿ ಮಾತನಾಡಿದ್ದ ಎಚ್.ಡಿ. ರೇವಣ್ಣ ಅವರು, ಸ್ವರೂಪ್ ಯಾರು ಅಂತಾನೇ ನನಗೆ ಗೊತ್ತಿಲ್ಲ ಎಂದಿದ್ದರು. ಹೀಗಾಗಿ, ಕೊನೆಯ ಕ್ಷಣದವರೆಗೂ ಭವಾನಿಗೆ ಟಿಕೆಟ್ ಕೊಡಿಸಲು ರೇವಣ್ಣ ಪಟ್ಟು ಹಿಡಿಯಲಿದ್ದಾರೆ ಎಂದ ತಿಳಿದುಬಂದಿದೆ.

RELATED ARTICLES

Related Articles

TRENDING ARTICLES