ಬೆಂಗಳೂರು : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ 48 ಗಂಟೆ ಬೆಂಗಳೂರಿನಲ್ಲಿ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಥವಾ ರಾತ್ರಿ ವೇಳೆ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಏಪ್ರಿಲ್ 2ರಿಂದ ಏಪ್ರಿಲ್ 5ರವರೆಗೆ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ.
ಕರಾವಳಿ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉತ್ತರ ಒಳನಾಡು ಮತ್ತು ಕರಾವಳಿ ಕೆಲವೆಡೆ ಸರಾಸರಿ 3-4 ಕನಿಷ್ಠ ಉಷ್ಣಾಂಶ ಇಳಿಕೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.