Thursday, January 23, 2025

ಟಾಸ್ ಗೆದ್ದ ಹೈದರಾಬಾದ್ ಫೀಲ್ಡಿಂಗ್ : ಇದೇ ರಾಜಸ್ಥಾನದ ಸ್ಟ್ರೆಂಥ್

ಬೆಂಗಳೂರು : ಇಂದು ಐಪಿಎಲ್‌ನಲ್ಲಿ ಎರಡು ಪಂದ್ಯಗಳು ನಡೆಯಲಿವೆ. ರಾಜಸ್ಥಾನ ರಾಯಲ್ಸ್ ಮತ್ತು ಹೈದರಾಬಾದ್ ನಡುವೆ ಮಧ್ಯಾಹ್ನ 3.30ಕ್ಕೆ ಹಾಗೂ ಮುಂಬೈ(MI) ಮತ್ತು ಆರ್ ಸಿಬಿ(RCB) ನಡುವೆ ರಾತ್ರಿ 7.30ಕ್ಕೆ ಹಣಾಹಣಿ ನಡೆಯಲಿದೆ.

ಇಂದಿನ ಐಪಿಎಲ್‌ನ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್(SRH), ರಾಜಸ್ಥಾನ ರಾಯಲ್ಸ್(RR) ತಂಡವನ್ನು ಎದುರಿಸುತ್ತಿದೆ. ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ಫೀಲ್ಡಿಂಗ್ ಆಯ್ದುಕೊಂಡಿದೆ.

ರಾಜಸ್ಥಾನ ಮೊದಲು ಬ್ಯಾಟಿಂಗ್ ನಡೆಸಲಿದೆ. ಎಸ್‌ಆರ್‌ಹೆಚ್ ತಂಡವನ್ನು ಭುವನೇಶ್ವರ್ ಕುಮಾರ್ ಮುನ್ನಡೆಸುತ್ತಿದ್ದಾರೆ. ಸಂಜು ಸಾಮ್ಸನ್ ನೇತೃತ್ವದ ರಾಜಸ್ಥಾನ ಕಳೆದ ಬಾರಿ ಫೈನಲ್ ಪ್ರವೇಶಿಸಿತ್ತು. ಈ ಬಾರಿಯೂ ರಾಜಸ್ಥಾನ ತಂಡ ಇದೇ ಸಾಧನೆ ಪುನರಾವರ್ತಿಸುವ ತವಕದಲ್ಲಿದೆ.

ರಾಜಸ್ಥಾನ್ ರಾಯಲ್ಸ್ ತಂಡ

ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಕೆ.ಎಂ ಆಸಿಫ್, ಚಾಹಲ್.

ಸನ್‌ರೈಸರ್ಸ್ ಹೈದರಾಬಾದ್ ತಂಡ

ಭುವನೇಶ್ವರ್ ಕುಮಾರ್ (ನಾಯಕ), ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಹ್ಯಾರಿ ಬ್ರೂಕ್, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಉಮ್ರಾನ್ ಮಲಿಕ್, ಆದಿಲ್ ರಶೀದ್, ಟಿ.ನಟರಾಜನ್, ಫಜಲ್‌ಹಕ್ ಫಾರೂಕಿ.

RELATED ARTICLES

Related Articles

TRENDING ARTICLES