ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ಅವರಿಗೆ ಸೋಲುವ ಭೀತಿಯಿದೆ. ಹೀಗಾಗಿ, ಚಿಕ್ಕಬಳ್ಳಾಪು ಅಥವಾ ಬೇರೆ ಕ್ಷೇತ್ರಕ್ಕೆ ಹೋಗುತ್ತಾರೆ ಎಂಬಿತ್ಯಾದಿಯಾಗಿ ಹಬ್ಬಿದ್ದ ಸುದ್ದಿಗೆ ಸ್ವತಃ ಬೊಮ್ಮಾಯಿ ಅವರೇ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ಮಾಧ್ಯಮ ಕೇಂದ್ರ ಉದ್ಘಾಟಿಸಿ ಮಾತನಾಡಿರುವ ಸಿಎಂ ಬೊಮ್ಮಾಯಿ, ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ.
ಚುನಾವಣೆಗೆ ಬಿಜೆಪಿ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದ್ದು, ನಾವು ಮಾಡಿದ ಸಾಧನೆಯ ವರದಿ ಹಿಡಿದು ಮತ ಕೇಳುತ್ತಿದ್ದೇವೆ. ಜೊತೆಗೆ ಕಾಂಗ್ರೆಸ್ ನ ದುರಾಡಳಿತದ ಬಗ್ಗೆಯೂ ಜನರಿಗೆ ತಿಳಿಸಲಾಗುವುದು ಎಂದು ಹೇಳಿದ್ದಾರೆ.
100ಕ್ಕೂ ಹೆಚ್ಚು ಪ್ರಕರಣ ಇರುತ್ತಿದ್ದವು
ಕಾಂಗ್ರೆಸ್ ಸರ್ಕಾರ ಇದ್ದಾಗ 50ಕ್ಕೂ ಹೆಚ್ಚು ಹಗರಣಗಳು ನಡೆದವು. ಲೋಕಯುಕ್ತ ನಿಷ್ಕ್ರಿಯಗೊಳಿಸಿ, ಎಸಿಬಿಯನ್ನು ರಚಿಸಿ ನಾವು ಏನೂ ಮಾಡಿಲ್ಲ ಎಂದು ಜನರ ಕಣ್ಣಿಗೆ ಮಣ್ಣು ಎರೆಚಿದ್ದಾರೆ. ಅವರ ಕಾಲದಲ್ಲಿ ಲೋಕಯುಕ್ತ ಇದ್ದಿದ್ದರೆ, 100 ಪ್ರಕರಣಗಳು ಅವರ ಮೇಲೆ ಇರುತ್ತಿದ್ದವು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ : 18 ಶಾಸಕರನ್ನು ಕರೆದ್ಕೊಂಡು ಹೋದ್ರಲ್ವಾ? ಆಗ ಎಲ್ಲಿ ಹೋಗಿತ್ತು ನೈತಿಕತೆ : ಡಿಕೆಶಿ ಕಿಡಿ
ಬಂಜಾರ ಸಮುದಾಯದ ಜೊತೆ ಚರ್ಚೆ
ಬಂಜಾರ ಸಮುದಾಯವನ್ನು ನಾವು ಕರೆದು ಮಾತನಾಡುತ್ತೇವೆ. ಬಂಜಾರ, ಭೋವಿ, ಕೊರಮ, ಕೊರಚ, ಈ ನಾಲ್ಕನ್ನು ಎಸ್ಸಿ ಪಟ್ಟಿಯಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಅಪ ಪ್ರಚಾರ ಮಾಡುತ್ತಿದ್ದಾರೆ
ಸದಾಶಿವ ಆಯೋಗದ ಬಿಟ್ಟು, ಸಚಿವ ಸಂಪುಟ ಉಪ ಸಮಿತಿ ಪ್ರಕಾರ ಇದನ್ನು ಮಾಡಿದ್ದೇವೆ. ಅವರಿಗೆ ಮೀಸಲಾತಿ ಪ್ರಮಾಣ ಕೂಡ ಜಾಸ್ತಿಯಾಗಿದೆ. ಇದರ ಬಗ್ಗೆ ಅಪ ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ನೇತಾರರು ಎಲ್ಲೆಲ್ಲಿ ಸ್ಪರ್ಧೆ ಮಾದುತ್ತಾರೋ ಅಲ್ಲಿ ಇದನ್ನು ರಾಜಕೀಯ ವಾಗಿ ಬಳಸಿಕೊಳ್ಳಲು ಯೋಜನೆ ಮಾಡಿದ್ದಾರೆ. ಆದರೆ, ಇದನ್ನು ನಾವು ರಾಜಕೀಯವಾಗಿ ಹೋರಾಡಲು ಮಾಡಲು ಸಿದ್ದರಿದ್ದೇವೆ ಎಂದು ಹೇಳಿದ್ದಾರೆ.