Monday, December 23, 2024

HDK ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್ : ತಂದೆಗೂ ಮೊದಲೇ ನಿಖಿಲ್ ನಾಮಪತ್ರ ಸಲ್ಲಿಕೆ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸುವುದೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿದೆ. ಇತ್ತ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತಮ್ಮ ನಾಮಪತ್ರ ಸಲ್ಲಿಕೆ ದಿನಾಂಕವನ್ನೇ ಘೋಷಣೆ ಮಾಡಿದ್ದಾರೆ.

ಹೌದು, ಇದೇ ಏಪ್ರಿಲ್ 19ರಂದು ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಏಪ್ರಿಲ್ 17ರಂದು ಹಾಗೂ ನಾನು ಏಪ್ರಿಲ್ 19ರಂದು ನಾಮಪತ್ರ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : BSY ಒಬ್ಬರೇ ಏಕಾಂಗಿಯಾಗಿ ಬಿಜೆಪಿ ಬೆಳೆಸಿದ್ರು : ಸಿಎಂ ಬೊಮ್ಮಾಯಿ ಬಣ್ಣನೆ

.20, 21ರಂದು ಪ್ರಚಾರ

ಏಪ್ರಿಲ್ 20 ಹಾಗೂ ಏಪ್ರಿಲ್ 21ರಂದು ಕ್ಷೇತ್ರದಲ್ಲಿ ಪ್ರಚಾರ ಮಾಡಿ ಮತಯಾಚನೆ ಮಾಡುತ್ತೇನೆ. ನಂತರ ರಾಜ್ಯಾದ್ಯಂತ ಪ್ರವಾಸ ಮಾಡಿ ಮತ ಕೇಳುತ್ತೇನೆ ಎಂದಿದ್ದಾರೆ. ಇನ್ನೂ, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ನಿಮ್ಮ ಮನೆ ಮಗನೇ ಸಿಎಂ ಆಗ್ತಾನೆ

ಚನ್ನಪಟ್ಟಣದ ಜನತೆ ಮೇಲೆ ನನಗೆ ಸಂಪೂರ್ಣ ವಿಶ್ವಾಸ ಇದೆ‌. ನಿಮ್ಮ ಮನೆ ಮಗನನ್ನು ಬಿಟ್ಟು ಬೇರೆ ಯಾರೂ ಸಿಎಂ ಆಗೋಕೆ ಆಗಲ್ಲ. ಮನೆ ಮಗನ ರೀತಿಯಲ್ಲಿ ನನಗೆ ಆಶೀರ್ವಾದ ಮಾಡ್ತೀರಿ. ರಾಮನಗರ ಜಿಲ್ಲೆಯ ಮೂರು ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲುತ್ತದೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಅನಿತಾ ಕುಮಾರಸ್ವಾಮಿ ಶಾಸಕಿಯಾಗಿರುವ ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ. ಇನ್ನೂ, ಸ್ವ-ಕ್ಷೇತ್ರ ಚನ್ನಪಟ್ಟಣದಲ್ಲಿ ಎಚ್.ಡಿ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ.

RELATED ARTICLES

Related Articles

TRENDING ARTICLES