Wednesday, January 22, 2025

‘ಭ್ರಷ್ಟ ಬಿಜೆಪಿ ಸರ್ಕಾರ’ ಬರಲು ಕಾರಣವಾಗಿದ್ದಕ್ಕೆ ನೋವಾಗ್ತಿದೆ : ಹಳ್ಳಿಹಕ್ಕಿ ಯೂಟರ್ನ್

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾಗಿದ್ದ ಹಲವು ಶಾಸಕರಲ್ಲಿ ಒಬ್ಬರಾಗಿದ್ದ ಹಳ್ಳಿಹಕ್ಕಿ ಖ್ಯಾತಿಯ ಹೆಚ್. ವಿಶ್ವನಾಥ್ ಇದೀಗ ಯೂಟರ್ನ್ ಹೊಡೆದಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗ ದಿಢೀರನೆ ಮೈಸೂರಿನ ನ್ಯಾಯಾಲಯದ ಮುಂಭಾಗ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿನೂತನವಾಗಿ ‘ಪಶ್ಚಾತಾಪ ಸತ್ಯಾಗ್ರಹ’ ಮಾಡಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಂತಹ ಭ್ರಷ್ಟ ಸರ್ಕಾರ ಬರಲು ನಾನು ಕಾರಣವಾಗಿದ್ದಕ್ಕೆ ನನಗೆ ಅತೀವ ನೋವಿದೆ ಎಂದು ಹೆಚ್.ವಿಶ್ವನಾಥ್ ಬೇಸರ ವ್ಯಕ್ತಪಡಿಸಿದ್ದಾರೆ.

ಡಬಲ್ ಇಂಜಿನ್ ಸರ್ಕಾರ ಇದ್ದರೆ ರಾಜ್ಯಕ್ಕೆ ಒಳಿತೆಂದು ಸಮ್ಮಿಶ್ರ ಸರ್ಕಾರ ಬಿಳಿಸಿ ಬಿಜೆಪಿ ಸರ್ಕಾರ ತಂದೆವು. ಆದರೆ, ಬಿಜೆಪಿ ಪರಮ ಭ್ರಷ್ಟ ಸರ್ಕಾರವಾಗಿದೆ. ಇಂತಹ ಸರ್ಕಾರ ಬರಲು ನಾನು ಕಾರಣವಾಗಿದ್ದಕ್ಕೆ ನನಗೆ ಅತೀವ ನೋವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕುತ್ತಿಗೆ ಕೊಯ್ದು ಹೋದವನು ಈ ವ್ಯಕ್ತಿ : ಕುಮಾರಸ್ವಾಮಿ ಕಿಡಿ

ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ

ನಾನು ಮಾಡಿದ ತಪ್ಪಿನಿಂದ ಇದೀಗ, ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ. ಪಾಪದ ಹೊರೆ ಇಳಿಸಿಕೊಳ್ಳಲು ‘ಪಶ್ಚಾತಾಪ ಸತ್ಯಾಗ್ರಹ’ ಮಾಡುತ್ತಿದ್ದೇನೆ ಎಂದು ತಾನು ತೆಗೆದುಕೊಂಡ ನಿರ್ಧಾರಕ್ಕೆ ಮರುಕ ವ್ಯಕ್ತಪಡಿಸಿದ್ದಾರೆ.

ನಾನು ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯನಾಗಿಲ್ಲ. ಸಾಹಿತ್ಯ ಕೋಟಾದಲ್ಲಿ ಎಂಎಲ್ ಸಿ (MLC) ಆಗಿದ್ದೇನೆ. ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ ಎಂದು ಇದೇ ವೇಳೆ ಹೆಚ್.ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ.

RELATED ARTICLES

Related Articles

TRENDING ARTICLES