Sunday, February 2, 2025

RCB ನನ್ನ ಹೆಮ್ಮೆಯ ತಂಡ, ‘ನಮ್ಮವರೂ ಕಪ್ ಗೆಲ್ಲುತ್ತಾರೆ’ : ಸಿದ್ದರಾಮಯ್ಯ

ಬೆಂಗಳೂರು : ಮುಂಬೈ ಹಾಗೂ ಆರ್ ಸಿಬಿ ತಂಡಗಳ ನಡುವೆ ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವೀಕ್ಷಣೆ ಮಾಡಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ ಅವರು ಆರ್‌ಸಿಬಿ ನನ್ನ ಹೆಮ್ಮೆಯ ತಂಡ ಎಂದು ಬರೆದುಕೊಂಡಿದ್ದಾರೆ.

ಕ್ರಿಕೆಟ್ ನನ್ನ ಇಷ್ಟದ ಆಟ. ಆರ್‌ಸಿಬಿ ನನ್ನ ಹೆಮ್ಮೆಯ ತಂಡ. ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್.ಸಿ.ಬಿ ಹುಡುಗರ ಜೊತೆಗಿದೆ. ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ‌ ಯಾವಾಗಲೂ ನಮ್ಮ ಆರ್‌ಸಿಬಿಗೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪಂದ್ಯ ವೀಕ್ಷಣೆ ವೇಳೆ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಎಂಎಲ್ಸಿಗಳಾದ ಪ್ರಕಾಶ್​ ರಾಠೋಡ್ ಹಾಗೂ ಕೆ.ಗೋವಿಂದ್ ರಾಜ್ ಸಾಥ್​ ನೀಡಿದ್ದಾರೆ.

ಈ ಸಲ ಕಪ್ಪು ನಮ್ದೇ, ಸರಕಾರವು ನಮ್ದೇ!

ಸಿದ್ದರಾಮಯ್ಯ ಪೋಸ್ಟ್ ಗೆ ನೆಟ್ಟಿಗರು ಕಾಮೆಂಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ‘ಸಿದ್ದರಾಮಯ್ಯ ಸರ್ ನೀವು ಹೋಗಿ ಓಪನಿಂಗ್ ಮಾಡಿದೀರಿ ಅಂದ್ಮೇಲೆ.. ಈ ಸಲ ಕಪ್ಪು ನಮ್ದೇ, ಸರಕಾರವು ನಮ್ದೇ! ಜೈ ಸಿದ್ದರಾಮಯ್ಯ!’ ಎಂದು ಕಾಮೆಂಟ್ ಹರಿಬಿಟ್ಟಿದ್ದಾರೆ.

ಪ್ಯಾನ್ಸ್ ಗಳಿಗೆ ರಸದೌತಣ

ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್​​​ ಸ್ಟೇಡಿಯಂನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಶುಭಾರಂಭ ಮಾಡಿದೆ. ವಿರಾಟ್​ ಕೊಹ್ಲಿ ಮತ್ತು ನಾಯಕ ಫಾಫ್​ ಡು ಪ್ಲೆಸಿಸ್​ ಅವರ ಅದ್ಭುತ ಅರ್ಧಶತಕಗಳ ನೆರವಿನಿಂದ 16ನೇ ಆವೃತ್ತಿಯಲ್ಲಿ ತನ್ನ ಮೊದಲ ಪಂದ್ಯವನ್ನು ಗೆದ್ದುಕೊಂಡಿದೆ. ಮುಂಬೈ ಇಂಡಿಯನ್ಸ್​ ವಿರುದ್ಧ 8 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ. ಜೊತೆಗೆ ನೆರೆದಿದ್ದ ಅಸಂಖ್ಯಾತ ಅಭಿಮಾನಿಗಳಿಗೆ ರಸದೌತಣ ಉಣ ಬಡಿಸಿದೆ.

RELATED ARTICLES

Related Articles

TRENDING ARTICLES