Tuesday, May 21, 2024

ಮತ್ತೆ ಚುನಾವಣೆಗೆ ಸ್ಪರ್ಧಿಸುವ ಮಾತೆಲ್ಲಿ? : ಅನಿತಾ ಕುಮಾರಸ್ವಾಮಿ

ಬೆಂಗಳೂರು : ಭವಾನಿ ರೇವಣ್ಣ ಟಿಕೆಟ್ ಕೇಳಿರುವ ಬೆನ್ನಲ್ಲೇ ಅನಿತಾ ಕುಮಾರಸ್ವಾಮಿ ಸ್ಪರ್ಧೆ ವಿಚಾರವೂ ಮುನ್ನಲೆಗೆ ಬಂದಿತ್ತು. ಇದಕ್ಕೆ ಶಾಸಕಿ ಅನಿತಾಕುಮಾರಸ್ವಾಮಿ ಟ್ವೀಟ್​ ಮಾಡುವ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.  

ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ ಎಂದು ಹೇಳಿದ್ದಾರೆ.

ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ರಾಮನಗರ ಕ್ಷೇತ್ರವನ್ನು ನನ್ನ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಪುನಾ ಸ್ಪರ್ಧಿಸುವ ಮಾತೆಲ್ಲಿ? ಎಂದು ಅನಿತಾ ಕುಮಾರಸ್ವಾಮಿ ತಿಳಿಸಿದ್ದಾರೆ.

2008ರಲ್ಲಿ ಆಪರೇಷನ್‌ ಕಮಲದ ಉಪ ಚುನಾವಣೆಯಲ್ಲಿ ಮಾಜಿ ಪ್ರಧಾನಮಂತ್ರಿ ಎಚ್.ಡಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರ ಆದೇಶ ಗೌರವಿಸಿ ಸ್ಪರ್ಧಿಸಿದ್ದೆ ಎಂದು ಹೇಳಿದ್ದಾರೆ.

ಎಲ್ಲಾ ಚುಣಾವಣೆಗಳಲ್ಲಿ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ. ಮುಂದೆ ಮಾಡುವುದೂ ಇಲ್ಲ. ದಯಮಾಡಿ ನನ್ನ ಭಾವನೆಗಳನ್ನು ಗೌರವಿಸಬೇಕೆಂದು ಮನವಿ ಮಾಡುತ್ತೇನೆ ಅಂತಾ ಶಾಸಕಿ ಅನಿತಾಕುಮಾರಸ್ವಾಮಿ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES