ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಫೀವರ್ ಹೆಚ್ಚಾದ ದಿನದಂದಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ನಾಯಕರು ಮೇಲಿಂದ ಮೇಲೆ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ಚುನಾವಣೆ ಹೊತ್ತಿನಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ನಾಯಕರ ರಾಜ್ಯ ಭೇಟಿ ಕರ್ನಾಟಕ ರಾಜ್ಯವನ್ನು ಟಾರ್ಗೆಟ್ ಮಾಡಿದಂತಿದೆ. ಏಪ್ರಿಲ್ ಪ್ರಧಾನಿ ಮೋದಿ ಮೈಸೂರು ಪ್ರವಾಸ ಕೈಗೊಳ್ಳಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ವಿಧಾನಸಭಾ ಚುನಾವಣೆ ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಮೇಲಿಂದ ಮೇಲೆ ರಾಜ್ಯ ಪ್ರವಾಸ ಕುತೂಹಲ ಮೂಡಿಸಿದೆ. ಏಪ್ರಿಲ್ 8ಕ್ಕೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿದ್ದು, ಮೈಸೂರಿನಲ್ಲಿಯೇ ಒಂದು ದಿನ ವಾಸ್ತವ್ಯ ಹೂಡಲಿದ್ದಾರೆ. ನವದೆಹಲಿಯಿಂದ ಏಪ್ರಿಲ್ 8ರಂದು ವಿಶೇಷ ವಿಮಾನದ ಮೂಲಕ ರಾತ್ರಿ 7.30ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಇದನ್ನೂ ಓದಿ : ಮೋದಿ ಫೋಟೋ ಹರಿದ ಶಾಸಕನಿಗೆ 99 ರೂ. ದಂಡ
ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ
ಬಳಿಕ ಎಂ.ಜಿ.ರಸ್ತೆಯಲ್ಲಿರುವ ರ್ಯಾಡಿಸನ್ ಬ್ಲೂ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಏಪ್ರಿಲ್ 9 ರಂದು ಬೆಳಗ್ಗೆ 6 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬಂಡೀಪುರಕ್ಕೆ ತೆರಳಲಿರೋ ಪ್ರಧಾನಿ ಮೋದಿ 50ನೇ ವರ್ಷದ ಸಂಭ್ರಮಾಚರಣೆಯಲ್ಲಿರೋ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಲಿದ್ದಾರೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಜೊತೆ ಸಂವಾದ ನಡೆಸಲಿದ್ದಾರೆ.
ಬೊಮ್ಮ ಹಾಗೂ ತಂಡದೊಂದಿಗೆ ಸಂವಾದ
ಇನ್ನೂ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ತೆಪ್ಪಕಾಡು, ಮಧುಮಲೈಗೆ ಭೇಟಿ ನೀಡಲಿದ್ದಾರೆ. ಮಧುಮಲೈನಲ್ಲಿ ಆಸ್ಕರ್ ಪುರಸ್ಕೃತ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿ ಚಿತ್ರದಲ್ಲಿ ನಟಿಸಿರೋ ಬೊಮ್ಮ ಹಾಗೂ ತಂಡದೊಂದಿಗೆ ಸಂವಾದ ನಡೆಸಲಿದ್ದಾರೆ.ಬಳಿಕ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಆಗಮಿಸಿ ಕೆಎಸ್ಓಯು ಘಟಿಕೋತ್ಸವ ಭವನದಲ್ಲಿ ನಡೆಯಲಿರೋ ಕಾರ್ಯಕ್ರಮದಲ್ಲಿ ಹುಲಿ ಗಣತಿ ವರದಿ ಬಿಡುಗಡೆ ಮಾಡಿ ಮಧ್ಯಾಹ್ನ 1 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮೈಸೂರು ಭೇಟಿ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗಾಗಿ ಡಿಸಿಪಿ ಅಲೋಕ್ ಕುಮಾರ್, ಮೈಸೂರು, ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಬಂಡೀಪುರಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.