Monday, December 23, 2024

ಸಮೃದ್ಧಿ ಮಂಜುನಾಥ್ ಸಮ್ಮುಖದಲ್ಲಿ ಜೆಡಿಎಸ್ ಸೇರಿದ ಕಾಂಗ್ರೆಸ್ ನಾಯಕರು

ಬೆಂಗಳೂರು : ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ನಾಯಕರಿಗೆ ಮೇಲಿಂದ ಮೇಲೆ ಬಿಗ್ ಶಾಕ್ ಎದುರಾಗಿದೆ. ಹಲವು ನಾಯಕರು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷ ಸೇರಿದ್ದಾರೆ.

ಜೆಡಿಎಸ್ ಪಕ್ಷದ ಸಿದ್ಧಾಂತಗಳು ಹಾಗೂ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಅವರ ಜನಪರ ಕಾಳಜಿ ಮೆಚ್ಚಿ ಇಂದು ಕಾಂಗ್ರೆಸ್ ನಾಯಕರು ಸಮೃದ್ಧಿ ಮಂಜುನಾಥ್ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಎನ್.ಆರ್.ಎಸ್ ಸತ್ಯಣ್ಣ ಹಾಗೂ ಹಲವು ಕಾಂಗ್ರೆಸ್ ಮುಖಂಡರು ಜೆಡಿಎಸ್ ಪಕ್ಷದ ಅಧ್ಯಕ್ಷರಾದ ಕಾಡೇನಹಳ್ಳಿ ನಾಗರಾಜಣ್ಣ, ನಲ್ಲೂರು ರಘುಪತಿ ಅಣ್ಣ ಹಾಗೂ ತಾಲ್ಲೂಕು ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಜೆಡಿಎಸ್ ಪಕ್ಷವನ್ನು ಸೇರಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಿಂದ 15 ಮಂದಿ JSDಗೆ : ಕುಮಾರಸ್ವಾಮಿ 

ಈ ವೇಳೆ ಜೆಡಿಎಸ್ ಪಕ್ಷದ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಅವರು ಪಕ್ಷಕ್ಕೆ ಸ್ವಾಗತ ಕೋರಿ ಮಾತನಾಡಿದ್ದಾರೆ. ರಾಜ್ಯದಲ್ಲಿ ಕುಮಾರಣ್ಣನವರ ಆಡಳಿತಕ್ಕಾಗಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು. ರಾಜ್ಯದಲ್ಲಿ ಜೆಡಿಎಸ್ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಬೇಕು ಎಂದು ಹೇಳಿದ್ದಾರೆ.

ಮುಳಬಾಗಿಲು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಬೇಕು. ಆ ಮೂಲಕ ಎಚ್.ಡಿ ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು. ಜೆಡಿಎಸ್ ಸಿದ್ಧಾಂತ ಹಾಗೂ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಆಗಬೇಕು. ಇದಕ್ಕಾಗಿ ನಾವೆಲ್ಲರೂ ಒಟ್ಟಾಗಿ ದುಡಿಯೋಣ ಎಂದು ಕಾರ್ಯಕರ್ತರಿಗೆ ಹುರಿದುಂಬಿಸಿದ್ದಾರೆ.

RELATED ARTICLES

Related Articles

TRENDING ARTICLES