ಬೆಂಗಳೂರು : ಐಪಿಎಲ್ ಚುಟುಕು ಸಮರ ಆರಂಭವಾಗಿ ಕ್ರಿಕೆಟ್ ಪ್ರೇಮಿಗಳನ್ನು ರಂಜಿಸುತ್ತಿದೆ. ಮತ್ತೊಂದೆಡೆ, ಪ್ರತಿಯೊಂದು ಪಂದ್ಯದಲ್ಲೂ ಬ್ಯಾಟರ್ ಹಾಗೂ ಬೌಲರ್ ಗಳು ಹೊಸ ದಾಖಲೆ ನಿರ್ಮಿಸಿತ್ತಿದ್ದಾರೆ.
ಹೌದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಬ್ಯಾಟರ್ ಋತುರಾಜ್ ಗಾಯಕ್ವಾಡ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.
ಋತುರಾಜ್ ಗಾಯಕ್ವಾಡ್ ಈವರೆಗೆ ಐಪಿಎಲ್ ನಲ್ಲಿ ಆಡದ ಎಲ್ಲಾ ತಂಡದ ವಿರುದ್ಧ ಅರ್ಧ ಶತಕ ಬಾರಿಸಿ ವಿಶಿಷ್ಟ ದಾಖಲೆ ಬರೆದಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ರಾಜಸ್ಥಾನ ರಾಯಲ್ಸ್, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್, ಸನ್ ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್, ಕಲ್ಕತ್ತಾ ನೈಟ್ ರೈಡರ್ಸ್, ಪಂಜಾಬ್ ಕಿಂಗ್ಸ್ ವಿರುದ್ಧ ಅರ್ಧ ಶತಕ ಬಾರಿಸಿದ್ದಾರೆ.
ಇದನ್ನೂ ಓದಿ: ಹೆಣ್ಣು ಮಗುವಿಗೆ ತಂದೆಯಾದ ಉಮೇಶ್ ಯಾದವ್
ಗಾಯಕ್ವಾಡ್ ಗೆ ಆರೆಂಜ್ ಕ್ಯಾಪ್
ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಎಲ್ಲಾ ಎದುರಾಳಿಗಳ ವಿರುದ್ಧ 50 ಪ್ಲಸ್ ರನ್ ಗಳಿಸಿದ ಏಕೈಕ ಆಟಗಾರ ಎಂಬ ಶ್ರೇಯಕ್ಕೆ ಋತುರಾಜ್ ಗಾಯಕ್ವಾಡ್ ಅವರು ಪಾತ್ರರಾಗಿದ್ದಾರೆ. ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಆಡಿದ ಮೊದಲೆರಡು ಪಂದ್ಯಗಳಲ್ಲಿ ಗಾಯಕ್ವಾಡ್ ಅವರು ಎರಡು ಅರ್ಧ ಶತಕ ಬಾರಿಸಿ ಟಾಪ್ ರನ್ನರ್ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ.
ಚೆನ್ನೈ ಗೆಲುವಿಗೆ 158 ರನ್ ಟಾರ್ಗೆಟ್
ಮುಂಬೈ ಹಾಗೂ ಚೆನ್ನೈ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಮುಂಬೈ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿಗೆ 158 ರನ್ ಗಳ ಟಾರ್ಗೆಟ್ ನೀಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ನಿಗದಿತ ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 157 ರನ್ ಕಲೆಹಾಕಿದೆ. ಇನ್ನೂ ಇನ್ನಿಂಗ್ಸ್ ಆರಂಭಿಸಿರುವ ಚೈನ್ನೈ ಎರಡು ವಿಕೆಟ್ ನಷ್ಟಕ್ಕೆ 125 ರನ್ ಕಲೆಹಾಕಿದೆ.