Wednesday, January 22, 2025

ಮೋದಿ ರಾಜ್ಯಕ್ಕೆ ಬಂದಾಗ ಮಹಾರಾಷ್ಟ್ರ ತಗಾದೆ ಬಗ್ಗೆ ಯಾಕೆ ಮಾತನಾಡುತ್ತಿಲ್ಲ? : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿಶ್ ಶಾ (Amit Shah) ಅವರು ರಾಜ್ಯಕ್ಕೆ ಬಂದಾಗ ಮಹಾರಾಷ್ಟ್ರ ತಗಾದೆ ಬಗ್ಗೆ ಯಾಕೆ ಮಾತನಾಡುತ್ತಿಲ್ಲ? ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರಶ್ನೆ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮೋದಿ ಹಾಗೂ ಅಮಿತ್ ಶಾ ಅವರು ರಾಜ್ಯಕ್ಕೆ ಬಂದಾಗ ಅನೇಕ ವಿಚಾರಗಳ ಬಗ್ಗೆ ಮಾತನಾಡುತ್ತಾರೆ. ಪ್ರಧಾನಿಗಳು ‘ನನ್ನ ಸಮಾಧಿ ತೊಡಲು ಪ್ರಯತ್ನಿಸುತ್ತಿದ್ದಾರೆ’ ಎಂದು ಹೇಳುತ್ತಾರೆ. ಆದರೆ ಕರ್ನಾಟಕದ ಬಗ್ಗೆ ಮಾತ್ರ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೊಮ್ಮಾಯಿಗೆ ಮಾನ ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ : ಡಿ.ಕೆ ಶಿವಕುಮಾರ್

ದಕ್ಷಿಣ ಕರ್ನಾಟಕ ಪ್ರತ್ಯೇಕ ರಾಜ್ಯ ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಶಾಸಕ ಶಿವರಾಜ್ ಪಾಟೀಲ್ ಜಿಲ್ಲಾ ಉಸ್ತುವಾರಿ ಸಚಿವರನ್ನು ಪಕ್ಕದಲ್ಲಿ ಕೂರಿಸಿಕೊಂಡೇ ರಾಯಚೂರನ್ನು ಆಂಧ್ರ ಪ್ರದೇಶಕ್ಕೆ ಸೇರಿಸಿ ಎನ್ನುತ್ತಾರೆ. ಸಚಿವ ಆನಂದ್ ಸಿಂಗ್ ಅವರು ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡಬೇಕು ಎಂದು ಹೇಳುತ್ತಾರೆ. ಆದರೆ ಈ ಬಗ್ಗೆ ಬಿಜೆಪಿ ಒಂದು ಮಾತನ್ನೂ ಆಡುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ವರಿಷ್ಠರನ್ನು ನೇರವಾಗಿ ಭೇಟಿ ಮಾಡಿ ರಾಜೀನಾಮೆ ನೀಡುತ್ತೇನೆ : ಷಫಿ ಅಹಮದ್

ಬಿಜೆಪಿ ಕರ್ನಾಟಕವನ್ನು ಒಡೆಯುತ್ತಿದೆ. ಅವರಿಗೆ ಕರ್ನಾಟಕದ ಅಸ್ಮಿತೆಯ ಬಗ್ಗೆ ಯಾವ ಕಾಳಜಿಯೂ ಇಲ್ಲ. ರಾಜ್ಯದ ಇತಿಹಾಸ ಹಾಗೂ ಕರ್ನಾಟಕದ ಏಕೀಕರಣಕ್ಕೆ ಅವರ ಕೊಡುಗೆಯೇ ಇಲ್ಲ. ಹೀಗಿರುವಾಗ ಅವರಿಗೆ ಕರ್ನಾಟಕ, ಕನ್ನಡದ ವಿಚಾರವಾಗಿ ಪ್ರೀತಿ ಹುಟ್ಟಲು ಹೇಗೆ ಸಾಧ್ಯ? ಎಂದು ಕಿಡಿಕಾರಿದ್ದಾರೆ.

RELATED ARTICLES

Related Articles

TRENDING ARTICLES