Wednesday, January 22, 2025

ಸಿದ್ದರಾಮಯ್ಯ ವಿರುದ್ಧ ನಾನು ಸ್ಪರ್ಧೆ ಮಾಡಲ್ಲ : ವಿ.ಸೋಮಣ್ಣ

ನವದೆಹಲಿ : ಚುನಾವಣೆ ದಿನಾಂಕ ನಿಗದಿಯದಂತೆ ಎಲ್ಲಾ ರಾಜಕೀಯ ಪಕ್ಷಗಳು ಈ ಬಾರಿ ಜಯಶಾಲಿಯಾಗಲು ತಮ್ಮದೇ ಆದ ಛಾಪುನ್ನ ಮೂಡಿಸಲು ಸತತ ಪ್ರಯತ್ನದಲ್ಲಿವೆ. ಹೀಗಿರುವಾಗ ರಾಜಕೀಯ ಪಕ್ಷದ ನಾಯಕರು ತಮ್ಮದೇ ರೀತಿಯಲ್ಲಿ ರಣತಂತ್ರ ರೂಪಿಸಿ  ಎದುರಾಳಿಗಳನ್ನು ಸೋಲಿಸಲು ಪಣ ತೊಟ್ಟಿದ್ದಾರೆ.

ಹೌದು, ಚುನಾವಣೆಯಲ್ಲಿ ಈ ಬಾರಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಶತಾಯಗತಾಯ ಸೋಲಿಸಲೇಬೇಕು ಎಂದು ಬಿಜೆಪಿ ನಾಯಕರು ವರುಣಾ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

ಇದನ್ನೂ ಓದಿ : ಅಭ್ಯರ್ಥಿಗಳ ಫಸ್ಟ್‌ಲಿಸ್ಟ್‌ ರಿಲೀಸ್‌ಗೆ ಕೇಸರಿ ಪಡೆ ಕಸರತ್ತು

ಇನ್ನೂ ಈ ಮೊದಲು ಬಿವೈ ವಿಜಯೇಂದ್ರ ಅವರನ್ನು ಕಣಕ್ಕಿಳಿಸುವ ಬಗ್ಗೆ ಭಾರೀ ಚರ್ಚೆಗಳು ನಡೆದಿದ್ದವು. ಆದ್ರೆ, ಯಡಿಯೂರಪ್ಪ ಅವರು ವಿಜಯೇಂದ್ರ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾಗ ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ ಎನ್ನುವುದು ಜಗಜ್ಜಾಹೀರಾಯ್ತು. ಇದಾದ ನಂತರ ಸಿದ್ದರಾಮಯ್ಯ ವಿರುದ್ಧ ಸಚಿವ ವಿ ಸೋಮಣ್ಣ (V Somanna) ಅವರು ಸ್ಪರ್ಧೆ ಮಾಡುತ್ತಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ ಇದಕ್ಕೆ ಸೋಮಣ್ಣ ಸ್ಪಷ್ಟಪಡಿಸಿದ್ದು, ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಯೆಸ್  ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ  ಇಂದು ನವದೆಹಲಿಯಲ್ಲಿ  ವಿ.ಸೋಮಣ್ಣ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸತ್ಯಕ್ಕೆ ದೂರವಾದ ವಿಚಾರ. ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯಾವುದೇ ಚರ್ಚೆ ಮಾಡಿಲ್ಲ. ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡುತ್ತೇನೆ ಎನ್ನುವುದು ಅದು ವದಂತಿ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ : ಸಫಾರಿ ಉಡುಗೆ ತೊಟ್ಟು ಬಂಡೀಪುರಕ್ಕೆ ಎಂಟ್ರಿ ಕೊಟ್ಟ ಪ್ರಧಾನಿ ಮೋದಿ

ನಾನು ಸಿದ್ದರಾಮಯ್ಯ ಒಟ್ಟಿಗೆ ರಾಜಕೀಯ ಪ್ರವೇಶ ಮಾಡಿದ್ದೇವೆ. ಸಿಎಂ ಆಗಿ ಅವರು ಹಲವು ಕೆಲಸ ಕಾರ್ಯ ಮಾಡಿದ್ದಾರೆ. ಚುನಾವಣೆಯಲ್ಲಿ ಯಾರು ನಿಲ್ಲುವುದು ಬಿಡುವುದು ಬಿಟ್ಟು ನಾವು ಇತಿಹಾಸ ನೋಡಬೇಕು. ಪಕ್ಷ ಯಾರನ್ನ ನಿಲ್ಲಿಸುತ್ತೋ ಅವರು ನಿಲ್ಲಬೇಕು. ನಾನು ಸಿದ್ದರಾಮಯ್ಯನ್ನ ವಿರುದ್ಧ ಸ್ಪರ್ಧೆ ಮಾಡುವ ಬಗ್ಗೆ ಪ್ರಶ್ನೆನೇ ಇಲ್ಲ ಎಂದು ಹೇಳಿದರು.

 

RELATED ARTICLES

Related Articles

TRENDING ARTICLES