Monday, December 23, 2024

ರಾತ್ರಿಯೇ ಮೊದಲ ಪಟ್ಟಿ ಬಿಡುಗಡೆ : ಜಗದೀಶ್ ಶೆಟ್ಟರ್

ಬೆಂಗಳೂರು : ಇಂದು ಸಂಜೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಿಗದಿಯಾಗಿದೆ. ಇಂದು ರಾತ್ರಿಯೇ ಬಿಜೆಪಿ ಪಟ್ಟಿ ಬಿಡುಗಡೆಯಾಗಬಹುದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬೆಂಗಳೂರಿನ ಜೆ.ಸಿ ನಗರದಲ್ಲಿ ಮಾಧ್ಯಮ ಕೇಂದ್ರ ಉದ್ಘಾಟನೆ ಬಳಿಕ ಮಾತನಾಡಿದ ಅವರು, ರಾತ್ರಿಯೇ ಮೊದಲ‌ ಪಟ್ಟಿ ಬಿಡುಗಡೆ ಆಗುವ ಮಾಹಿತಿ ಇದೆ ಎಂದು ತಿಳಿಸಿದ್ದಾರೆ.

ಈ ಬಾರಿ ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕೈತಪ್ಪುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕೆಲವೆಡೆ ಶಾಸಕರ ವಿರೋಧಿ‌ ಅಲೆ, ಆರೋಗ್ಯ ಸಮಸ್ಯೆ ಇರುತ್ತೆ. ಹಾಗಾಗಿ ಟಿಕೆಟ್ ಕೈತಪ್ಪುತ್ತೆ ಎಂಬ ಚರ್ಚೆಯಲ್ಲಿರುತ್ತೆ ಎಂದು ಹೇಳಿದ್ದಾರೆ.

ಬಾರಿ ನಾನು ಸ್ಪರ್ಧೆ ಮಾಡುತ್ತೇನೆ

ಧಾರವಾಡದಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ವಿಚಾರವಾಗಿ ಮಾತನಾಡಿ, ಈ ಕುರಿತು ನಮ್ಮ ಹೈಕಮಾಂಡ್ ತೀರ್ಮಾನ ಮಾಡಲಿದೆ. ಈ ಬಾರಿ ನಾನು ಸ್ಪರ್ಧೆ ಮಾಡುತ್ತೇನೆ. ಎಲ್ಲದಕ್ಕೂ ಇಂದು ರಾತ್ರಿ ಉತ್ತರ ಸಿಗಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ : ಏ.16ಕ್ಕೆ ಕೋಲಾರದಲ್ಲಿ ರಾಗಾ ‘ಜೈ ಭಾರತ ಸತ್ಯಾಗ್ರಹ’ : ಡಿ‌.ಕೆ ಶಿವಕುಮಾರ್

ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ನಮ್ಮ ಲಿಸ್ಟ್ ಬಿಡುಗಡೆ ಆಗಿದೆ. ಹಿಂದಿನ ಚುನಾವಣೆಯಲ್ಲೂ ಇದೇ ತರಹ ಆಗಿದೆ. ಹೀಗಾಗಿ ವಿಳಂಬ ಅನ್ನೋ ಪ್ರಶ್ನೆ ಬರಲ್ಲ. ಕಾಂಗ್ರೆಸ್ ಒಂದು ತಿಂಗಳ ಮುಂಚೆ 224 ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಮಾಡುತ್ತೇವೆ ಅಂದಿದ್ದರು. ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ಮಾಡಿಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಪುತ್ರನಿಗೆ ಟಿಕೆಟ್​ ಬೇಡಿಕೆಯಿಟ್ಟ ಸೋಮಣ್ಣ

ಸಚಿವ ವಿ.ಸೋಮಣ್ಣ ತನ್ನ ಮಗನಿಗಾಗಿ ಟಿಕೆಟ್ ನೀಡಲು ವರಿಷ್ಠರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ತುಮಕೂರಿನ ಗುಬ್ಬಿ ಕ್ಷೇತ್ರದಿಂದ ಪುತ್ರನಿಗೆ ಟಿಕೆಟ್ ​ನೀಡಬೇಕೆಂದು ಸೋಮಣ್ಣ ಬೇಡಿಕೆ ಇಟ್ಟಿದ್ದಾರೆ. ಅಲ್ಲದೇ ದೂರವಾಣಿ ಮೂಲಕ ಅಮಿತ್ ಶಾ ಜೊತೆಗೂ ಮಾತುಕತೆ ನಡೆಸಿದ್ದು, ಯಾವುದೇ ನಾಯಕರ ಮಕ್ಕಳಿಗೆ ಟಿಕೆಟ್ ಕೊಟ್ಟಲ್ಲಿ ನನ್ನ ಮಗ ಅರುಣ್​ಗೂ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES