Monday, December 23, 2024

ಬಿಗ್ ಅಪ್ಡೇಟ್ : ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ನಿರಾಸೆ

ಬೆಂಗಳೂರು : ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಬಿಜೆಪಿ ಹೈಕಮಾಂಡ್ ಭಾರೀ ಕಸರತ್ತು ನಡೆಸುತ್ತಿದೆ. ಟಿಕೆಟ್ ಫೈನಲ್ ಮಾಡಲು ರಾಜ್ಯ ಬಿಜೆಪಿ ನಾಯಕರು ನವದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಮೇಲಿಂದ ಮೇಲೆ ಸರಣಿ ಸಭೆಗಳು ನಡೆಯುತ್ತಿವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ, ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ.

ಇತ್ತ, ಇಂದು ಸಂಜೆ ವೇಳೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹ ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದಿದ್ದರು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಟಿಕೆಟ್ ನಿರೀಕ್ಷೆಯಲ್ಲಿದ್ದ ಆಕಾಂಕ್ಷಿತ ಅಭ್ಯರ್ಥಿಗಳಿಗೆ ನಿರಾಸೆ ಮೂಡಿಸಿದ್ದಾರೆ.

ಇದನ್ನೂ ಓದಿ : ರಾತ್ರಿಯೇ ಮೊದಲ ಪಟ್ಟಿ ಬಿಡುಗಡೆ : ಜಗದೀಶ್ ಶೆಟ್ಟರ್

ಪಟ್ಟಿ ರಿಲೀಸ್ ಯಾವಾಗ?

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಬಹುತೇಕವಾಗಿ ನಾಳೆ ಅಥವಾ ನಾಡಿದ್ದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಲಿದೆ. ಇವತ್ತು ಸಂಜೆ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಆದರೆ, ಚರ್ಚೆಗಳು ಇರುವುದರಿಂದ ನನ್ನ ಪ್ರಕಾರ ನಾಳೆಯಾಗುವ ಸಾಧ್ಯತೆ ಇದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಮೊದಲ ಪಟ್ಟಿಯಲ್ಲೇ ನಿಮ್ಮೆಲ್ಲ ಪ್ರಶ್ನೆಗಳಿಗೆ, ನಿರೀಕ್ಷೆಗಳಿಗೆ ಉತ್ತರ ಸಿಗಲಿದೆ. ಅಭ್ಯರ್ಥಿಗಳ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ರಾಜಕೀಯವಾಗಿ ಏನೇನು ಆಗಬೇಕು ಅದೆಲ್ಲವೂ ಆಗಲಿದೆ. ಆದರೆ ಅದ್ಯಾವುದನ್ನೂ ಇಲ್ಲಿ ಹೇಳಲು ಆಗುವುದಿಲ್ಲ. ಇನ್ನೂ ಒಂದಷ್ಟು ಗ್ರೌಂಡ್ ಇನ್​​ಫಾರ್ಮೇಷನ್ ಪಡೆದುಕೊಳ್ಳಬೇಕಿದೆ ಎಂದು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES