Sunday, January 19, 2025

ಇಂದು ಸಂಜೆಯೊಳಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ : ಬಿಎಸ್ ವೈ

ಬೆಂಗಳೂರು : ರಾಜ್ಯದ ವಿಧಾನ ಸಭಾ ಚುನಾವಣೆ ಇನ್ನೂ ಒಂದು ತಿಂಗಳು ಮಾತ್ರ ಬಾಕಿ ಇದ್ದು, ಇನ್ನೂ ಕೇಸರಿ ಪಡೆ  ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಮೀನಾವೇಷ ಏಣಿಸುತ್ತಿದೆ. ಎಂಬ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಇಂದು ತರೆ ಎಳಿಯಲು ಸಜ್ಜಾಗಿದೆ

ಹೌದು, ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ (BJP Ticket) ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (BS Yediyurappa) ನವದೆಹಲಿಯಲ್ಲಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮೊದಲ ಪಟ್ಟಿಯಲ್ಲಿ 170ರಿಂದ 180 ಅಭ್ಯರ್ಥಿಗಳನ್ನು ಬಿಡುಗಡೆ ಮಾಡಲಾಗುತ್ತದೆ. ಅದಕ್ಕೂ ಮುನ್ನ ಒಂದು ಸಭೆಯನ್ನು ನಡೆಸಿ, ಕೆಲವು ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : BJP Candidates ಪಟ್ಟಿ ರಿಲೀಸ್​ಗೆ ಕ್ಷಣಗಣನೆ​ : ಯಾರಿಗೆ ಲಕ್​​.? ಯಾರಿಗೆ ಶಾಕ್​?

ಇನ್ನೂ, ಮಧ್ಯಾಹ್ನದ ಒಳಗೆ ಸಭೆ ನಡೆಯಲಿದ್ದು, ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್ ಗೆ ಕೆಲ ಕೇಸರಿ ಕಲಿಗಳಿಗೆ ನಡುಕ ಹುಟ್ಟಿದೆ. ಟಿಕೆಟ್ ಆಕಾಂಕ್ಷಿಗಳಲ್ಲಿ ಎದೆಬಡಿತ ಹೆಚ್ಚಾಗಿದೆ.  ಪಕ್ಷ ನಿಷ್ಠವಲ್ಲದ, ಭ್ರಷ್ಟಾಚಾರದಲ್ಲಿ ಹೆಸರು ತಳಕು ಹಾಕಿಕೊಂಡ, ವಯಸ್ಸಿನ ಕಾರಣ, ವರ್ಚಸ್ಸು ಕಳೆದುಕೊಂಡಿರುವ, ಆಡಳಿತ ವಿರೋಧಿ ಅಲೆ ಹಾಗೂ ಇನ್ನಿತರ ಕಾರಣಗಳಿಂದ ಕೆಲವು ಹಾಲಿ ಶಾಸಕರು ಹಾಗೂ ಸಚಿವರಿಗೆ ಗೇಟ್ ಪಾಸ್ ನೀಡಲು ವರಿಷ್ಠರು ತೀರ್ಮಾನಿಸಿದ್ದಾರೆ.

 

RELATED ARTICLES

Related Articles

TRENDING ARTICLES