Monday, November 4, 2024

Dk Shiva kumar : ಪಕ್ಷದಲ್ಲಿ ನಾಯಕರನ್ನು ಹಿಡಿದಿಟ್ಟುಕೊಳ್ಳಲು ಬಿಜೆಪಿಯ ಪಟ್ಟಿ ಬಿಡುಗಡೆ ವಿಳಂಬ

ಬೆಂಗಳೂರು: ಚುನಾವಣೆಗೆ ಒಂದು ತಿಂಗಳು ಮಾತ್ರ ಬಾಕಿ ಇದೆ ಅಂದ್ರೆ ಇನ್ನೂ ಕೂಡ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಬ ಬಿಡುಗಡೆ ಮಾಡಿಲ್ಲ. ‘ಬಿಜೆಪಿ ಪಕ್ಷದಲ್ಲಿ ಸಾಕಷ್ಟು ಗೊಂದಲಗಳಿವೆ. ಅವರಿಗೆ ಅಭ್ಯರ್ಥಿ ಅಂತಿಮ ಮಾಡಲು ಸಾಧ್ಯವಾಗುತ್ತಿಲ್ಲ. ಬಿಜೆಪಿಯ ನಾಯಕರು ಆ ಪಕ್ಷ ತೊರೆಯಲು ಕಾಯುತ್ತಿದ್ದಾರೆ. ಹೀಗಾಗಿ ತಮ್ಮ ನಾಯಕರುಗಳನ್ನು ಪಕ್ಷದಲ್ಲೇ ಹಿಡಿದಿಟ್ಟುಕೊಳ್ಳು ಅವರು ಪಟ್ಟಿ ಬಿಡುಗಡೆ ಮಾಡುತ್ತಿಲ್ಲ.ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ತಡವಾಗುತ್ತಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಬಿಜೆಪಿಯವರು ತಮ್ಮ ನಾಯಕರನ್ನು ಈ ರೀತಿ ಹಿಡಿದಿಟ್ಟುಕೊಳ್ಳಬಹುದು. ಆದರೆ ರಾಜ್ಯದ ಮತದಾರರು ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಸರ್ಕಾರವನ್ನು ತರಲು ತೀರ್ಮಾನ ಮಾಡಿಯಾಗಿದೆ’ ಎಂದು ತಿಳಿಸಿದರು.

ಇದನ್ನೂ ಓದಿ : BJP Candidates ಪಟ್ಟಿ ರಿಲೀಸ್​ಗೆ ಕ್ಷಣಗಣನೆ​ : ಯಾರಿಗೆ ಲಕ್​​.? ಯಾರಿಗೆ ಶಾಕ್​?

ಇನ್ನೂ ಕಾಂಗ್ರೆಸ್ ಪಕ್ಷದ ಮೂರನೇ ಪಟ್ಟಿ ಬಿಡುಗಡೆ ಯಾವಾಗ ಎಂದು ಕೇಳಿದಾಗ, ‘ಬಿಜೆಪಿಯ ಪಟ್ಟಿ ಬಿಡುಗಡೆ ಮಾಡಲಿ ನೋಡೋಣ. ಅವರ ಮೊದಲ ಪಟ್ಟಿ ಬಿಡುಗಡೆ ಯಾವಾಗ ಎಂದು ನೀವು ಅವರನ್ನು ಕೇಳುತ್ತಲೇ ಇಲ್ಲ. ಅವರು ಪಟ್ಟಿ ಬಿಡುಗಡೆ ಮಾಡಲಿ ನೋಡೋಣ’ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಪ್ಪ ನೇಮಕ

‘ಧೃವನಾರಾಯಣ ಅವರು ಇಂದು ನಮ್ಮ ಜತೆ ಇಲ್ಲ. ಅವರ ಸ್ಥಾನವನ್ನು ತುಂಬಲು ಅದೇ ಪ್ರಭಾವ ಹಾಗೂ ಅವರ ಆತ್ಮೀಯರಾದ ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಚಂದ್ರಪ್ಪ ಅವರು ಹಿರಿಯರು, ಉತ್ತಮವಾಗಿ ಕೆಲಸ ಮಾಡುತ್ತಾರೆ. ಅವರಿಗೆ ಶುಭವಾಗಲಿ. ಅವರು ಧೃವನಾರಾಯಣ ಅವರ ಜಾಗದಲ್ಲಿ ಕೂತು ಕಾಂಗ್ರೆಸ್ ಪಕ್ಷ ಸಂಘಟನೆ ಮಾಡುವ ಕೆಲಸ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

ಟಿಕೆಟ್ ವಂಚಿತರಿಗೆ ಜೆಡಿಎಸ್ ಗಾಳ

ಅನೇಕ ಟಿಕೆಟ್ ವಂಚಿತರಿಗೆ ಜೆಡಿಎಸ್ ಗಾಳ ಹಾಕುತ್ತಿರುವ ಬಗ್ಗೆ ಮಾತನಾಡಿದ ಅವರು , ‘ಅವ್ರು ಹಾಕಲಿ, ತೊಂದರೆ ಇಲ್ಲ. ಅವರ ಪಕ್ಷದಿಂದ ಹಾಲಿ ಶಾಸಕರುಗಳೇ ನಮ್ಮ ಪಕ್ಷ ಸೇರುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರ ಪಕ್ಷದಿಂದ ಸ್ಪರ್ಧಿಸಿದ್ದ 20 ಮಂದಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ನಾವು ಅವರ ಪ್ರಯತ್ನವನ್ನು ಪ್ರಶ್ನಿಸುವುದಿಲ್ಲ. ರಾಜಕೀಯದಲ್ಲಿ ಇದೆಲ್ಲವೂ ಸರ್ವೇ ಸಾಮಾನ್ಯ. ರಾಜ್ಯದ ಜನರ ಆಶೀರ್ವಾದದಿಂದ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ. ಜನರ ಸೇವೆ ಮಾಡಿ ಪ್ರಜಾಪ್ರಭುತ್ವ ರಕ್ಷಣೆ ಮಾಡುತ್ತೇವೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರು ಯಾರು.? 

ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರು ಯಾರು ಎಂದು ಇನ್ನೂ ತಿಳಿಸಿಲ್ಲ , ‘ನಮ್ಮ ಸಂಸ್ಕೃತಿಯೇ ನಮ್ಮ ದೇಶದ ಆಸ್ತಿ. ಪ್ರತಿಯೊಬ್ಬರಿಗೂ ಅವರದೇ ಆದ ನಂಬಿಕೆ, ಆಚರಣೆ ಇರುತ್ತದೆ. ನಮ್ಮ ದೇಶದಲ್ಲಿ ರಾಮನ ತಂದೆ ಧಶರಥನಿಗಿಂತ ರಾಮನ ಭಂಟ ಹನುಮಂತನಿಗೆ ಹೆಚ್ಚು ದೇವಾಲಯಗಳಿವೆ. ಕಾರಣ ಸಮಾಜದಲ್ಲಿ ಯಾರು ಸೇವೆ ಮಾಡುತ್ತಾರೋ ಅವರಿಗೆ ಜನ ಆದ್ಯತೆ ನೀಡುತ್ತಾರೆ’ ಎಂದು ತಿಳಿಸಿದರು.

 

RELATED ARTICLES

Related Articles

TRENDING ARTICLES