Monday, December 23, 2024

ಆರ್ ಸಿಬಿ ಅಬ್ಬರ.. ಲಕ್ನೋಗೆ 213 ಬೃಹತ್ ಟಾರ್ಗೆಟ್

ಬೆಂಗಳೂರು : ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೃಹತ್ ಮೊತ್ತ ದಾಖಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 2 ವಿಕೆಟ್ ಕಳೆದುಕೊಂಡು 212 ರನ್ ಗಳಿಸಿತು.

ಆರ್ ಸಿಬಿ ಪರ ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 4 ಬೌಂಡರಿಯೊಂದಿಗೆ 61, ಡುಪ್ಲೆಸಿಸ್ 46 ಎಸೆತಗಳಲ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್ ನೊಂದಿಗೆ ಅಜೇಯ 79* ಹಾಗೂ ಮ್ಯಾಕ್ಸ್ ವೆಲ್ 29 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 4 ಬೌಂಡರಿಯೊಂದಿಗೆ 59 ರನ್ ಗಳಿಸಿದರು.

ವಿರಾಟ್ ಕೊಹ್ಲಿ ಅಬ್ಬರ

ಲಕ್ನೋ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅಬ್ಬರಿಸಿದ್ದಾರೆ. 4 ಸಿಕ್ಸರ್ ಹಾಗೂ 4 ಬೌಂಡರಿ ನೆರವಿನಿಂದ ಅರ್ಧಶತಕ ಬಾರಿಸಿದರು. ಇದು ವಿರಾಟ್ ಕೊಹ್ಲಿ ಅವರ 46ನೇ ಐಪಿಎಲ್ ಅರ್ಧಶತಕವಾಗಿದ್ದು, ಈ ಐಪಿಎಲ್ ನಲ್ಲಿ ಕೇವಲ 3 ಇನ್ನಿಂಗ್ಸ್ ಗಳಲ್ಲಿ ಎರಡನೇ ಅರ್ಧಶತಕ ಬಾರಿಸಿದ್ದಾರೆ.

ಆರಂಭದಿಂದಲೂ ಅಬ್ಬರಿಸಿದ ಆರ್ ಸಿಬಿ ಬ್ಯಾಟರ್ ಗಳನ್ನು ಕಟ್ಟಿಹಾಕುವಲ್ಲಿ ಲಕ್ನೋ ಬೌಲರ್ ಗಳು ವಿಫಲರಾದರು. ಲಕ್ನೋ ಪರ ಅಮಿತ್ ಮಿಶ್ರಾ ಹಾಗೂ ಮಾರ್ಕ್ ವುಡ್ ತಲಾ ಒಂದು ವಿಕೆಟ್ ಪಡೆದರು.

RELATED ARTICLES

Related Articles

TRENDING ARTICLES