Monday, December 23, 2024

ನಾಮಪತ್ರ ಸಲ್ಲಿಕೆಗೂ ಮುನ್ನ ಮತ ಬೇಟೆಗಿಳಿದ ‘ಕೌರವ’ ಪಾಟೀಲ್

ಹಾವೇರಿ : ಕೃಷಿ ಸಚಿವ ಹಾಗೂ ಹಿರೇಕೆರೂರು ಕ್ಷೇತ್ರದ ಶಾಸಕ ಬಿ.ಸಿ. ಪಾಟೀಲ್ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ಭರ್ಜರಿ ಮತ ಬೇಟೆ ಆರಂಭಿಸಿದ್ದು, ಕ್ಷೇತ್ರದಲ್ಲಿ ಹವಾ ಹೆಚ್ಚಾಗುತ್ತಿದೆ.

ಇಂದು ಹಿರೇಕೆರೂರು ವಿಧಾನಸಭಾ ಕ್ಷೇತ್ರದ ನಾಗವಂದ, ಅಣಜಿ, ಹಿರೇಕಬ್ಬಾರ, ತಡಕನಹಳ್ಳಿ ಗ್ರಾಮಗಳಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದರು. ಈ ವೇಳೆ ಗ್ರಾಮದ ಅಪಾರ ಸಂಖ್ಯೆಯಲ್ಲಿ ಜನರು ಪಾಟೀಲ್ ಅವರಿಗೆ ವಾದ್ಯ ಮೇಳಗಳನ್ನು ಬಾರಿಸುತ್ತಾ, ಜೈಕಾರ ಹಾಕಿ ಅದ್ದೂರಿ ಸ್ವಾಗತ ಕೋರಿದರು.

ಕೊಟ್ಟ ಮಾತಿನಂತೆ ನಡೆದಿದ್ದೇವೆ

ನಾಗವಂದ ಗ್ರಾಮದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ಕೊಟ್ಟ ಮಾತಿನಂತೆ ನಾವು ಅಭಿವೃದ್ಧಿಯನ್ನು ಮಾಡಿದ್ದೇವೆ. ಈ ಬಾರಿ ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ಗೆ ಮತ್ತೊಂದು ಶಾಕ್ : ಬಿಜೆಪಿಗೆ ಸೇರ್ಪಡೆಯಾದ ಡಿಕೆಶಿ ಆಪ್ತ

ಕಮಲಕ್ಕೆ ಮತ ನೀಡಿ, ಆಶೀರ್ವದಿಸಿ

ಅಲ್ಲದೇ, ರಾಜ್ಯ ಸರಕಾರ ಮೀಸಲಾತಿ ವಿಷಯದಲ್ಲೂ ಐತಿಹಾಸಿಕ ನಿರ್ಣಯ ತೆಗೆದುಕೊಂಡು ಎಲ್ಲ ಸಮುದಾಯಗಳಿಗೆ ಅನುಕೂಲ ಕಲ್ಪಿಸಿದೆ. ಎಲ್ಲರೂ ಒಗ್ಗಟ್ಟಿನಿಂದ ಪ್ರಯತ್ನಿಸಿ ಚುನಾವಣೆಯಲ್ಲಿ ಬಿಜೆಪಿಯ ಕಮಲದ ಗುರುತಿಗೆ ಮತ ನೀಡಿ, ನಮಗೆ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ಬಿ.ಸಿ ಪಾಟೀಲ್ ಅವರ ಗೃಹ ಕಚೇರಿಯಲ್ಲಿ ತಾಲೂಕಿನ ಯಲ್ಲಾಪುರ, ಗೊಡಚಿಕೊಂಡ, ಗ್ರಾಮದ ಬಿಎಚ್ ಬನ್ನಿಕೋಡ ಬೆಂಬಲಿಗರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷ ಸೇರ್ಪಡೆಯಾದರು.

RELATED ARTICLES

Related Articles

TRENDING ARTICLES