Wednesday, January 22, 2025

ಜಮೀರ್ ಗೆ ಶಾಕ್ : ಮೊದಲ ಪ್ರಯತ್ನದಲ್ಲೇ ಟಿಕೆಟ್ ಗಿಟ್ಟಿಸಿಕೊಂಡ ಭಾಸ್ಕರ್ ರಾವ್

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದು, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಮೊದಲ ಪ್ರಯತ್ನದಲ್ಲಿಯೇ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು, ಮಾಜಿ ಐಪಿಎಸ್ ಭಾಸ್ಕರ್ ರಾವ್ ಅವರು ಎರಡು ತಿಂಗಳ ಹಿಂದೆಯಷ್ಟೇ ಎಎಪಿ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಅವರು ಟಿಕೆಟ್ ಪಡೆದುಕೊಂಡಿರುವುದು ಗಮನಾರ್ಹವಾಗಿದೆ.

ಭಾಸ್ಕರ್ ರಾವ್ ಅವರು ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಶಾಸಕ ಬಿ.ಝಡ್ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಕಣ್ಣಕ್ಕಿಳಿಯಲಿದ್ದಾರೆ. ಅವರು ಬಸವನಗುಡಿ ಕ್ಷೇತ್ರದಿಂದ ಸ್ಪರ್ಧಿಸುವುದಕ್ಕೆ ಪ್ರಯತ್ನಿಸಿದ್ದರು. ಆ ಮೂಲಕ ಈ ಬಾರಿ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ಚುನಾವಣಾ ಕಣಕ್ಕಿಳಿದಿರುವುದು ವಿಶೇಷ.

ಇದನ್ನೂ ಓದಿ : ಮಾದಪ್ಪ ಏನು ಮಾಡ್ತಾನೋ ಗೊತ್ತಿಲ್ಲ : ಸೋಮಣ್ಣ

ಶ್ರೀರಾಮುಲು ಕ್ಷೇತ್ರ ಬದಲಾವಣೆ

ಕಳೆದ ಬಾರಿ ಮೊಣಕಾಲ್ಕೂರು ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಬಿ.ಶ್ರೀರಾಮುಲು, ಈ ಬಾರಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಬಿಜೆಪಿ ವರಿಷ್ಠರು ಶಿಕಾರಿಪುರ ಟಿಕೆಟ್ ನೀಡಿದ್ದಾರೆ.  ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಡಿಸುವಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ.

RELATED ARTICLES

Related Articles

TRENDING ARTICLES