Thursday, October 31, 2024

ಬಿಜೆಪಿಗೆ ದೊಡ್ಡ ಶಾಕ್ : ಕೆ.ಎಸ್.ಈಶ್ವರಪ್ಪ ರಾಜಕೀಯ ಭವಿಷ್ಯ ಅಂತ್ಯ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ ರಾಜ್ಯ ಬಿಜೆಪಿಗೆ ದೊದ್ಡ ಆಘಾತ ಎದುರಾಗಿದೆ. ಪ್ರಬಲ ಕಮಲ ನಾಯಕ ಎಂದೇ ಗುರುತಿಸಿಕೊಂಡಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸುಧೀರ್ಘ ರಾಜಕೀಯ ಜೀವನದಿಂದ ನಿವೃತ್ತಿ ಹೊಂದುವ ದೊಡ್ಡ ನಿರ್ಧಾರ ಮಾಡಿದ್ದಾರೆ.

ಹೌದು, ಬಿಜೆಪಿ ಅಭ್ಯರ್ಥಿಗಳ ಟಿಕೆಟ್ ಘೋಷಣೆ ಸಮಯದಲ್ಲೇ ಕೆ.ಎಸ್ ಈಶ್ವರಪ್ಪ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮಹತ್ವದ ಬೆಳವಣಿಗೆಯಲ್ಲಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಲು ಮಾಜಿ ಸಚಿವ ಕೆಎಸ್ ಈಶ್ವರಪ್ಪ ತೀರ್ಮಾನಿಸಿದ್ದಾರೆ. ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಈಶ್ವರಪ್ಪ ಪತ್ರ ಬರೆದಿದ್ದಾರೆ.

ಇದನ್ನೂ ಓದಿ : ಹಾಸನದಲ್ಲಿ ‘ಮನೆ ಹಾಳು ಮಾಡುವ ಶಕುನಿಗಳು’ ಇದ್ದಾರೆ : ಕುಮಾರಸ್ವಾಮಿ ಕಿಡಿ

ನನ್ನ ಹೆಸರನ್ನ ಯಾವುದೇ ಕ್ಷೇತ್ರಕ್ಕೆ ಪರಿಗಣಿಸದಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಚುನಾವಣಾ ರಾಜಕೀಯಕ್ಕೆ ಈಗಾಗಲೇ ಹಲವು ಬಿಜೆಪಿ ಹಿರಿಯ ನಾಯಕರು ಗುಡ್​ಬೈ ಹೇಳಿದ್ದಾರೆ. ಮಾಜಿ ಸಿಎಂ ಬಿಎಸ್​ವೈ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಎಸ್​.ಎ.ರವೀಂದ್ರನಾಥ್​ ಬೆನ್ನಲ್ಲೇ ಇದೀಗ ಕೆ.ಎಸ್​.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

Related Articles

TRENDING ARTICLES