Monday, December 23, 2024

ಕೌರವ ಪಾಟೀಲ್ ಟೆಂಪಲ್ ರನ್ : ಕುಟುಂಬ ಸಮೇತ ಮನೆ ದೇವರ ದರ್ಶನ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಕೃಷಿ ಸಚಿವ ಬಿ.ಸಿ ಪಾಟೀಲ್ ಟೆಂಪಲ್ ರನ್ ಶುರು ಮಾಡಿದ್ದಾರೆ.

ಇತ್ತೀಚೆಗೆ ಕುಟುಂಬ ಸಮೇತವಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದ ಬಿ.ಸಿ ಪಾಟೀಲ್ ಇದೀಗ ಕೊಲ್ಲೂರಿನ ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ನಡೆಸಿದ್ದಾರೆ.

ತಿರುಪತಿ ತಿಮ್ಮಪ್ಪನ ದರ್ಶನ

ಬಿಜೆಪಿ ಕೈಕಮಾಂಡ್ ಈ ಬಾರಿ ಹಿರೇಕೆರೂರು ಕ್ಷೇತ್ರದ ಟಿಕೆಟ್ ಅನ್ನು ಕೃಷಿ ಸಚಿವ ಹಾಗೂ ಹಾಲಿ ಕ್ಷೇತ್ರದ ಶಾಸಕರಾಗಿರುವ ಬಿ.ಸಿ ಪಾಟೀಲ್ ಅವರಿಗೆ ನೀಡಿದೆ. ಹೀಗಾಗಿ, ಚುನಾವಣೆಯ ನಾಮಪತ್ರ ಸಲ್ಲಿಕೆಗೂ ಮುನ್ನ ಕುಟುಂಬ ಸಮೇತರಾಗಿ ಕೊಲ್ಲೂರಿನ ಮೂಕಾಂಬಿಕಾ ದೇವಿಯ ದರ್ಶನ ಹಾಗೂ ಮನೆ ದೇವರು ತಿರುಪತಿ ದೇವರ ದರ್ಶನ ಪಡೆದು ಚುನಾವಣೆ ಸಿದ್ಧತೆ ನಡೆಸಿದ್ದಾರೆ.

ಇದನ್ನೂ ಓದಿ : ಮಾದಪ್ಪ ಏನು ಮಾಡ್ತಾನೋ ಗೊತ್ತಿಲ್ಲ : ಸೋಮಣ್ಣ 

ಈ ಕುರಿತು ಮಾತನಾಡಿರುವ ಸಚಿವ ಬಿ.ಸಿ ಪಾಟೀಲ್, ನಿನ್ನೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಇಂದು ಕುಟುಂಬ ಸಹಿತ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿ, ನಾಡಿನ ಸಮಸ್ತ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು ಎಂದು ಹೇಳಿದ್ದಾರೆ.

ವರಿಷ್ಠರಿಗೆ ಧನ್ಯವಾದ ತಿಳಿಸಿದ ಬಿ.ಸಿ ಪಾಟೀಲ್

ಹಿರೇಕೆರೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸಿದ ನಮ್ಮ ಬಿಜೆಪಿ ಪಕ್ಷದ ವರಿಷ್ಠರಿಗೆ ತುಂಬು ಹೃದಯದ ಧನ್ಯವಾದಗಳು. ಕ್ಷೇತ್ರದ ಜನತೆಯ ಸೇವೆಗೆ ಈ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಂಡು ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವುದಾಗಿ ಈ ಮೂಲಕ ಪ್ರಮಾಣ ಮಾಡುತ್ತೇನೆ ಎಂದು ಬಿ.ಸಿ ಪಾಟೀಲ್ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES