Wednesday, January 22, 2025

ಬಿಗ್ ಅಪ್ಡೇಟ್ : ಬಿಜೆಪಿ ಎರಡನೇ ಪಟ್ಟಿ ಯಾವಾಗ ಗೊತ್ತಾ?

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ನಿನ್ನೆ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇದೀಗ ಉಳಿದ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳು ಹಾಗೂ ಶಾಸಕರ ಚಿತ್ತ ಎರಡನೇ ಪಟ್ಟಿಯತ್ತ ನೆಟ್ಟಿದೆ.

ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡನೇ ಪಟ್ಟಿ ಬಿಡುಗಡೆ ಬಗ್ಗೆ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಎರಡನೇ ಪಟ್ಟಿ ಅತೀ ಶೀಘ್ರದಲ್ಲೇ ಬರುತ್ತೆ, ನಾಳೆ ಅಥವಾ ನಾಡಿದ್ದು ಬಿಡುಗಡೆಯಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ : ಟಿಕೆಟ್ ಕೈತಪ್ಪಿದ್ದಕ್ಕೆ ‘ಬಿಕ್ಕಿಬಿಕ್ಕಿ ಅತ್ತ’ ಶಾಸಕ ರಘುಪತಿ ಭಟ್

ಅಸಮಾಧಾನಗೊಂಡ ಎಲ್ಲಾ ಆಕಾಂಕ್ಷಿಗಳ ಜೊತೆ ಮಾತನಾಡ್ತಾ ಇದ್ದೀನಿ. ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ನನ್ನ ಮತ್ತು ಪಕ್ಷದ ಜೊತೆಗೆ ಭಾವನಾತ್ಮಕ ಸಂಬಂಧ ಇದೆ. ಸ್ವಲ್ಪ ಕೋಪದಲ್ಲಿ ಕೆಲ ವಿಷಯ ಹೇಳಿದ್ದಾರೆ, ಮಾತನಾಡಿ ಬಗೆಹರಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ರಾಜಕೀಯ ನಿವೃತ್ತಿ ಆಗಿಲ್ಲ. ಚುನಾವಣೆ ರಾಜಕೀಯದಲ್ಲಿ ಇರ್ತಾರೆ. ಅವರ ಜೊತೆಗೆ ವರಿಷ್ಠರು ಈಗಾಗಲೇ ಮಾತನಾಡಿದ್ದಾರೆ. ಇನ್ನು ಸುಳ್ಯದ ಶಾಸಕ ಅಂಗಾರ ಬಹಳ ಜೆಂಟಲ್​​ಮನ್ ರಾಜಕಾರಣಿ, ನಾನು ಅವರ ಜೊತೆ ಮಾತನಾಡ್ತೇನೆ ಎಂದು ತಿಳಿಸಿದ್ದಾರೆ.

ನಡ್ಡಾ ಜೊತೆ ಚರ್ಚೆ ಮಾಡಿದ್ದೇನೆ

ಇನ್ನೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ನಿನ್ನೆ ನಡ್ಡಾ ಅವರು ಬರಲು ಹೇಳಿದ್ದರು. ಹುಬ್ಬಳ್ಳಿ- ಧಾರವಾಡ ಕ್ಷೇತ್ರದ ಬಗ್ಗೆ ಚರ್ಚೆ ಮಾಡಬೇಕಿತ್ತು. ನಡ್ಡಾ ಅವರ ಜೊತೆ ಚರ್ಚೆ ಮಾಡಿದ್ದೇನೆ. ಎಲ್ಲಾ ವಿಚಾರಗಳನ್ನು ತಿಳಸಿದ್ದೇನೆ. ಎಲ್ಲಾ ವಿಚಾರಗಳನ್ನು ಪಡೆದಿರುವ ಅವರು, ಯೋಗ್ಯವಾದ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES