ಬೆಂಗಳೂರು : ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಜೆಪಿ ವರಿಷ್ಠರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ಸ್ವಾಭಿಮಾನಿ ರಾಜಕಾರಣಿ. ಲಜ್ಜೆಗೆಟ್ಟ ರಾಜಕಾರಣಿ ಅಲ್ಲ ಎಂದು ಬಿಜೆಪಿ ವಿರುದ್ಧ ಟೀಕಾಪ್ರಹಾರ ಮಾಡಿದ್ದಾರೆ.
ಬೇರೆ ಬೇರೆ ಪಕ್ಷದ ಮುಖಂಡರು ನನ್ನ ಸಂಪರ್ಕ ಮಾಡಿದ್ದಾರೆ. ಅವರಿಗೆ ಹೇಳಿದ್ದೇನೆ ನನ್ನ ಹೈ ಕಮಾಂಡ್ ಹೇಳಿದ ಹಾಗೆ ಎಂದು. ಖಂಡಿತವಾಗಿಯೂ ತೀರ್ಮಾನ ಮಾಡಿದ್ದೇನೆ. ಪ್ರಾಥಮಿಕ ಸದಸ್ಯತ್ವ ಹಾಗೂ ಪರಿಷತ್ ಸ್ಥಾನಕ್ಕೂ ರಾಜೀನಾಮೆ ಕೊಡುತ್ತೇನೆ ಎಂದು ಲಕ್ಷಣ ಸವದಿ ಸ್ಪಷ್ಟಪಡಿಸಿದ್ದಾರೆ.
ಭಿಕ್ಷೆ ಪಾತ್ರೆ ಇಟ್ಟುಕೊಂಡು ತಿರುಗುವನು ನಾನಲ್ಲ. ಅಧಿಕಾರಿದ ಅಮಲಿನಲ್ಲಿ ನಾನಿಲ್ಲ. ಜಿಲ್ಲೆಯಲ್ಲಿ ಯಾರು ಬೆನ್ನಿಗೆ ಚೂರಿ ಹಾಕಿಲ್ಲ ಎನ್ನುವ ಮೂಲಕ ರಮೇಶ ಜಾರಕಿಹೊಳಿ ವಿರುದ್ದ ಲಕ್ಷ್ಮಣ ಸವದಿ ಅಸಮಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ : ಬಿಜೆಪಿ ಪಟ್ಟಿ ‘ಕೈ’ ನಾಯಕರ ಎದೆ ನಡುಗಿಸಿದೆ : ಈಶ್ವರಪ್ಪ
ಕುಮಟಳ್ಳಿಗೆ ಬಿಜೆಪಿ ಟಿಕೆಟ್
ಶಾಸಕ ಮಹೇಶ ಕುಮಟಳ್ಳಿ ಬದಲಿಗೆ ತಮಗೆ ಟಿಕೆಟ್ ಕೊಡಬೇಕು ಎಂದು ಲಕ್ಷ್ಮಣ ಸವದಿ ಪಟ್ಟು ಹಿಡಿದಿದ್ದರು. ಆದರೆ, ರಮೇಶ್ ಜಾರಕಿಹೊಳಿ ಲಾಬಿಯಿಂದ ಬಿಜೆಪಿ ಹೈಕಮಾಂಡ್ ಮಹೇಶ್ ಕುಮಟಳ್ಳಿಗೆ ಟಿಕೆಟ್ ಘೋಷಿಸಿದೆ. ಹೀಗಾಗಿ, ಬಿಜೆಪಿ ಪಕ್ಷದಿಂದ ಹೊರ ನಡೆಯುವ ನಿರ್ಧಾರ ಮಾಡಿರುವ ಲಕ್ಷ್ಮಣ ಸವದಿ, ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಸಾಧ್ಯತೆ ದಟ್ಟವಾಗಿದೆ.