Friday, April 19, 2024

ದೊಡ್ಡ ಘೋಷಣೆ : ಯುವತಿಯರಿಗೆ 2 ಲಕ್ಷ ರೂ. ಪ್ರೋತ್ಸಾಹ ಧನ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಮತದಾರರ ಓಲೈಕೆಗೆ ಹಲವು ಭರವಸೆ ಹಾಗೂ ಯೋಜನೆಗಳನ್ನು ಘೋಷಣೆ ಮಾಡುತ್ತಿವೆ. ಅದರಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ದೊಡ್ಡ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಜೆಡಿಎಸ್ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ರೈತರನ್ನು ಮದುವೆಯಾಗುವ ಯುವತಿಯರಿಗೆ 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದ್ದಾರೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕುಮಾರಸ್ವಾಮಿ, ರೈತರನ್ನು ಮದುವೆಯಾಗಲು ಹೆಣ್ಣುಮಕ್ಕಳು ಸಿದ್ಧವಿಲ್ಲ ಅನ್ನುವ ಕಾರಣಕ್ಕೆ ಈ ಘೋಷಣೆ ಮಾಡಿದ್ದೇನೆ. ರೈತ ಹುಡುಗರು ಕೂಡ ಮದುವೆ ಬಗ್ಗೆ ಹೆಚ್ಚು ಯೋಚನೆ ಮಾಡುವಂತಾಗಬಾರದು ಅನ್ನುವ ಕಾರಣವೂ ಈ ಯೋಜನೆಯ ಹಿಂದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ‘ಜಾತಿ ಹೆಸರಲ್ಲಿ ಮತ ಕೊಟ್ಟು, ಯಾವ ಸ್ಥಿತಿಗೆ ಬಂದಿದ್ದೀರಾ’ ನೋಡಿ : ಕುಮಾರಸ್ವಾಮಿ ಕಳವಳ

ಕಾರ್ಯಕರ್ತರ ಸಭೆ ಕರೆದ ರೇವಣ್ಣ

ಹಾಸನ ಟಿಕೆಟ್ ಗೊಂದಲದ ನಡುವೆ ಮಾಜಿ ಸಚಿವ ಎಚ್.ಡಿ ರೇವಣ್ಣ ಕಾರ್ಯಕರ್ತರ ಸಭೆ ಕರೆದಿದ್ದಾರೆ. ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಕಾರ್ಯಕರ್ತರ ಸಭೆ ನಡೆಯಲಿದೆ. ಚುನಾವಣೆ ಸಮೀಪಿಸುತ್ತಿರೋ ಹಿನ್ನೆಲೆ ಸಂಘಟನೆ ದೃಷ್ಠಿಯಿಂದ ಸಭೆ ನಡೆಯಲಿದ್ದು, ಸಭೆಯಲ್ಲಿ ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಭಾಗಿಯಾಗಲಿದ್ದಾರೆ.

ಟಿಕೆಟ್ ಗೊಂದಲದಿಂದ ತಮ್ಮ ಕ್ಷೇತ್ರದಲ್ಲಿ ಪ್ರಚಾರಕ್ಕೆ ಬ್ರೇಕ್ ಹೇಳಿದ್ದ ರೇವಣ್ಣ ಹಾಸನ ಹಾಗೂ ಹೊಳೆನರಸೀಪುರ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡೋ ಬಗ್ಗೆ ಕಾರ್ಯಕರ್ತರ ಅಭಿಪ್ರಾಯ ಪಡೆಯಲು ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ತಮ್ಮ ಕ್ಷೇತ್ರದ ಕಾರ್ಯಕರ್ತರ ಮುಂದೆ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧೆ ಗೊಂದಲಕ್ಕೆ ತೆರೆ ಎಳೆಯೋ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

RELATED ARTICLES

Related Articles

TRENDING ARTICLES