Monday, December 23, 2024

ದೊಡ್ಡಬಳ್ಳಾಪುರದಲ್ಲಿ ‘ಧೀರಜ್’ ದರ್ಬಾರ್ : ಅಬ್ಬರದ ಪ್ರಚಾರ

ದೊಡ್ಡಬಳ್ಳಾಪುರ : ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಲರ್ಟ್ ಆಗಿದ್ದು, ಎದುರಾಳಿಗಳಿಗೆ ನಡುಕ ಹುಟ್ಟಿದೆ.

ಹೌದು, ಬಿಜೆಪಿ ಮೊದಲ ಪಟ್ಟಿಯಲ್ಲೇ ಅತಿ ಚಿಕ್ಕ ವಯಸ್ಸಿಗೆ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿರು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಹವಾ ಜೋರಾಗಿಯೇ ಇದೆ.

ಕ್ಷೇತ್ರದಲ್ಲಿ ಧೀರಜ್ ಮುನಿರಾಜು ಅಬ್ಬರದ ಪ್ರಚಾರ ನಡೆಸಲು ಸಕಲ ರೀತಿಯ ಸಿದ್ಧತೆ ನಡೆಸಿಕೊಂಡಿದ್ದಾರೆ. ಇನ್ನೂ ಟಿಕೆಟ್ ಸಿಗದಿದ್ದಕ್ಕೆ ಕೇಲ ಆಕಾಂಕ್ಷಿಗಳು ಅಸಮಾಧಾನಗೊಂಡಿದ್ದಾರೆ ಅವರನ್ನು ಇನ್ನೂ ಎರಡು ಮೂರು ದಿನಗಳಲ್ಲಿ ಒಗ್ಗೂಡಿಸಿಕೊಂಡು ಹೋಗುವ ಪ್ರಯತ್ನ ಮಾಡುತ್ತೇನೆ ಎಂದರು.

ಇನ್ನೂ ಬಿಜೆಪಿಯ ಕೇಂದ್ರದ ಸಾಧನೆ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಜೊತೆಗೆ ಸ್ಥಳಿಯ ಕಾಂಗ್ರೆಸ್ ಶಾಸಕರ ವೈಪಲ್ಯಗಳನ್ನು ಮತದಾರರ ಮುಂದೆ ಹಿಡುತ್ತೇನೆ ಎಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ತಿಳಿಸಿದರು.

RELATED ARTICLES

Related Articles

TRENDING ARTICLES