Wednesday, January 22, 2025

ರಾಜ್ಯದಲ್ಲಿ ‘ಕಮಲ ಅರಳುವುದು ನಿಶ್ಚಿತ’ : ಡಾ.ಕೆ ಸುಧಾಕರ್ ವಿಶ್ವಾಸ

ಬೆಂಗಳೂರು : ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿಯೇ ಭರವಸೆಯಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ನಿಶ್ಚಿತವಾಗಿ ಕಮಲ‌ ಅರಳಲಿದೆ ಎಂದು ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿರುವ ಅವರು, 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ನಾನು ಕಟುಂಬದವರೊಂದಿಗೆ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದ ಜನತೆಯ ಸೇವೆ ಮಾಡುವ ಉದ್ದೇಶದಿಂದ ಚುನಾವಣಾ ರಾಜಕೀಯಕ್ಕೆ ಧುಮುಕಿದ ನನ್ನನ್ನು ಮೂರು ಬಾರಿ ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ಅಲ್ಲದೆ, ರಾಜ್ಯ ರಾಜಕಾರಣದವರೆಗೆ ಬೆಳೆಸಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಪ್ರೀತಿ, ವಿಶ್ವಾಸಗಳಿಗೆ ನಾನು ಎಂದೆಂದೂ ಚಿರ‌ಋಣಿ ಎಂದು ಸುಧಾಕರ್ ಸ್ಮರಿಸಿದ್ದಾರೆ.

ಇದನ್ನೂ ಓದಿ : ಏ.18ರಂದು ಜೆಡಿಎಸ್ ಅಭ್ಯರ್ಥಿಯಾಗಿ ದತ್ತಾ ನಾಮಪತ್ರ ಸಲ್ಲಿಕೆ

ನವ ಚಿಕ್ಕಬಳ್ಳಾಪುರ ಕಟ್ಟುವ ನನ್ನ ಸಂಕಲ್ಪ

ಈಗ ನಾಲ್ಕನೇ ಬಾರಿ ಜನರ ಆಶೀರ್ವಾದ ಪಡೆಯಲು ನಾನು ಬಯಸಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರವನ್ನು ರಾಜ್ಯದ ಮಾದರಿ ಕ್ಷೇತ್ರವನ್ನಾಗಿಸುವ ಸಂಕಲ್ಪವನ್ನು ಹೊಂದಿದ್ದೇನೆ. ನವ ಚಿಕ್ಕಬಳ್ಳಾಪುರ ಕಟ್ಟುವ ನನ್ನ ಸಂಕಲ್ಪಕ್ಕೆ ಕ್ಷೇತ್ರದ ಜನರು ಕೈಜೋಡಿಸುತ್ತಾರೆ. ನನ್ನನ್ನು ಮತ್ತೊಮ್ಮೆ ಆಶೀರ್ವದಿಸುತ್ತಾರೆ ಎಂಬ ಅಚಲ ವಿಶ್ವಾಸ ನನ್ನದು ಎಂದು ಹೇಳಿದ್ದಾರೆ.

ನಾಮಪತ್ರಕ್ಕೂ ಮುನ್ನ ಟೆಂಪಲ್ ರನ್

ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಡಾ.ಕೆ ಸುಧಾಕರ್ ಅವರು ಮನೆ ದೇವರಾದ ಚಿಕ್ಕಪೈಲಗುರ್ಕಿ ಗ್ರಾಮದ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ತೆರಳಿ ದರ್ಶನ ಪಡೆದಿದ್ದಾರೆ.

RELATED ARTICLES

Related Articles

TRENDING ARTICLES