Wednesday, January 22, 2025

ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು : ರಾಜ್ಯ ವಿಧಾನ ಸಭಾ ಚುನಾವಣೆಯ ಹಬ್ಬಕ್ಕೆ ಎಲ್ಲಾ ರಾಜ್ಯಕೀಯ ಪಕ್ಷಗಳು ಸಿದ್ಧವಾಗಿವೆ. ಅಂದ್ರೆ ಇದೀಗ ಚುನಾವಣೆಯ ಅಸಲಿ ಅಖಾಡ ಈಗ ಸಿದ್ದವಾಗಿದ್ದು, ಚುನಾವಣೆಯ ಕಣಕ್ಕೆ ಅಭ್ಯರ್ಥಿಗಳ ಸ್ಪರ್ಧಿ ಆರಂಭವಾಗಿದೆ.

ಹೌದು, ಇಂದಿನಿಂದ (ಏಪ್ರಿಲ್​ 13) ಚುನಾವಣಾ ಸ್ಪರ್ಧಿಗಳಿಗೆ ನಾಮಪತ್ರಸಲ್ಲಿಕೆ ಆರಂಭವಾಗಿದೆ. ಏಪ್ರಿಲ್‌ 20ರವರೆಗೂ ನಾಮಪತ್ರ ಸಲ್ಲಿಸಬಹುದಾಗಿದೆ.

ಇನ್ನೂ ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16 ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಹೀಗಾಗಿ ನಾಮಪತ್ರ ಸಲ್ಲಿಕೆಗೆ ಏಳು ದಿನಗಳಲ್ಲಿ ಎರಡು ದಿನ ಸರ್ಕಾರಿ ರಜೆ ಇರಲಿದ್ದು, ಐದು ದಿನಗಳು ಮಾತ್ರ ನಾಮಪತ್ರ ಸಲ್ಲಿಕೆಗೆ ಕಾಲಾವಕಾಶ ಇದೆ. ಇದೇ ಮೊದಲ ಬಾರಿಗೆ ಆನ್ ಲೈನ್​ ಮೂಲಕ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಚುನಾವಣೆ ಆಯೋಗದ ವೆಬ್​ಸೈಟ್​ನಲ್ಲಿ ಎಲ್ಲಾ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ.

ಬಿಜೆಪಿ 211 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಇವತ್ತು ಇನ್ನೋಂದು ಪಟ್ಟಿ ಬಿಡುಗೆಡ ಮಾಡುವ ಸಾಧ್ಯತೆ ಇದೆ. 116 ಕ್ಷೇತ್ರಗಳ ಪಟ್ಟಿಯನ್ನು ಕಾಂಗ್ರೆಸ್​ ಬಿಡುಗಡೆ ಮಾಡಿದೆ. ಇನ್ನೂ ಮೂರನೇ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಜೆಡಿಎಸ್​ ಮೊದಲ ಪಟ್ಟಿಯಲ್ಲಿ 93 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿ ಬಿಡುಗಡೆ ಮಾಡಲು ಕೆಲವು ಆತಂಕಗಳು ಎದುರಾಗಿವೆ.

ಇದನ್ನೂ ಓದಿ: ಬಿಜೆಪಿ ಮೊದಲ ಪಟ್ಟಿ ಔಟ್ : ಇವರೇ ನಿಮ್ಮ ಕ್ಷೇತ್ರದ ಅಭ್ಯರ್ಥಿಗಳು

ನಾಮಪತ್ರಗಳನ್ನು ಸಲ್ಲಿಸಲು ಸಮಯವನ್ನು ಈಗಲೇ ನಿಗದಿಪಡಿಸಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಬಹುದಾಗಿದೆ.  ಚುನಾವಣಾಧಿಕಾರಿಗಳ ಅನುಮತಿ ಪಡೆದುಕೊಂಡು ದೊಡ್ಡ ಮಟ್ಟದಲ್ಲಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆಗೆ ಆಗಮಿಸಬಹುದು. ಆದ್ರೆ,  ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿ ಪ್ರವೇಶಿಸಲು ಅವಕಾಶವಿದ್ದು, 100 ಮೀಟರ್ ವ್ಯಾಪ್ತಿಯಲ್ಲಿ 3 ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿರುತ್ತದೆ.

ನಾಮಪತ್ರ ಸಲ್ಲಿಕೆಯಾಗದಿದ್ದರೂ ಇನ್ನೂ ಕೆಲವು ಅಭ್ಯರ್ಥಿಗಳು ಈಗಲೇ ಪ್ರಚಾರ ಆರಂಭಿಸಿದ್ದು, ಪಕ್ಷದ ನಾಯಕರೂ ಕೂಡ ಕ್ಷೇತ್ರಗಳಲ್ಲಿ ಓಡಾಡಿ ಛಾಪು ಮೂಡಿಸುತ್ತಿದ್ದಾರೆ.

  • ಇಂದಿನಿಂದ ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ
  • ಏ.21ರಂದು ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರಗಳ ಪರಿಶೀಲನೆ
  • ನಾಮಪತ್ರ ವಾಪಸ್​ ಪಡೆಯಲು ಏ.24ರಂದು ಕೊನೆಯ ದಿನ
  • ಮೇ.10ರಂದು ಒಂದೇ ಹಂತದಲ್ಲಿ ಮತದಾನ
  • ಮೇ 13ರಂದು ಮತ ಎಣಿಕೆ

RELATED ARTICLES

Related Articles

TRENDING ARTICLES