Thursday, December 19, 2024

‘ಜೀವ ಇರೋವರೆಗೂ ಕಾಂಗ್ರೆಸ್’ಗೆ ಹೋಗಲ್ಲ : ಸೊಗಡು ಶಿವಣ್ಣ

ಬೆಂಗಳೂರು : ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿರುವುದಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ, ಪಕ್ಷಕ್ಕೆ ರಾಜೀನಾಮೆ ನೀಡಿ ಬೇರೆ ಪಕ್ಷ ಸೇರ್ಪಡೆಯಾಗುವ ಬಗ್ಗೆ ಮಾಹಿತಿ ನೀಡಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನನಗೆ ಟಿಕೆಟ್ ಕೈ ತಪ್ಪಲು ನಾಲ್ಕು ಜನ ಕಾರಣ. ಸಂಸದ ಜಿ.ಎಸ್ ಬಸವರಾಜ್, ಹಾಲಿ ಶಾಸಕ ಜಿ.ಬಿ ಜ್ಯೋತಿ ಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಹಾಗೂ ಮಾಜಿ ಶಾಸಕ ಬಿ. ಸುರೇಶ್ ಗೌಡ ಅದ್ರಲ್ಲಿ ಪ್ರಮುಖರಾಗಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಮನ್ನಣೆ. ಹೀಗಾಗಿ, ನಾನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಇದೇ ವೇಳೆ ಮಾಜಿ ಸಚಿವ ಸೊಗಡು ಶಿವಣ್ಣ ಸ್ಪಷ್ಟಪಡಿಸಿದ್ದಾರೆ.

ದೇವೇಗೌಡರು ಹಿಯರಿದ್ದಾರೆ

ಇನ್ನೂ ಬಿಜೆಪಿ ತೊರೆದ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ನಾನು ಜೀವ ಇರೋವರೆಗೂ ಕಾಂಗ್ರೆಸ್ ಗೆ ಹೋಗಲ್ಲ. ಮಾಜಿ ಪ್ರಧಾನಿ ದೇವೇಗೌಡರು ಹಿಯರಿದ್ದಾರೆ ನಾವು ಅವರಿಗೆ ಜೂನಿಯರ್.  ಅವರ ನಮ್ಮ ನಡುವೆ ಒಳ್ಳೆಯ ಬಾಂಧವ್ಯ ಇದೆ. ನಮ್ಮ ಬೆಂಬಲಿಗರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಬಿಜೆಪಿಗೆ ಶಾಕ್​ : ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ರಾಜೀನಾಮೆ

ಹಲವು ಪಕ್ಷದಿಂದ ಆಫರ್ ಬಂದಿದೆ.

ಟಿಕೆಟ್ ಕೈ ತಪ್ಪಿದಕ್ಕೆ ನಿನ್ನೆ ಕಾರ್ಯಕರ್ತ ಸಭೆ ಕರೆದಿದ್ದೆ. ಸಭೆಯಲ್ಲಿ ಸ್ವಯಂ ಪ್ರೇರಿತವಾಗಿ  ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆಯನ್ನು ನೂರಾರು ಕಾರ್ಯಕರ್ತರು ನೀಡಲು ನಿರ್ಧಾರ ಮಾಡಿದ್ದು, ಸಭೆ ತೀರ್ಮಾನಕ್ಕೆ ನಾನು ಬದ್ಧ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಮೇಲ್ ಮುಖಾಂತರ ರಾಜೀನಾಮೆ ಪತ್ರ ರವಾನೆ ಮಾಡಿದ್ದೇನೆ. ಚುನಾವಣೆಯಲ್ಲಿ ಬಹುತೇಕ ಸ್ಪರ್ಧೆ ಖಚಿತ. ನನಗೆ ಹಲವು ಪಕ್ಷದಿಂದ ಆಹ್ವಾನ ಬಂದಿದೆ. ಕಾರ್ಯಕರ್ತರ ಜೊತೆ ಮಾತನಾಡಿ ತೀರ್ಮಾನ ಮಾಡುತ್ತೇನೆ ಎಂದು ಸೊಗಡು ಶಿವಣ್ಣ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES