ಬೆಂಗಳೂರು : ಜೆಡಿಎಸ್ ಪಕ್ಷ ತೊರೆದು ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದ ವೈಎಸ್ ವಿ ದತ್ತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿತ್ತು. ಹೀಗಾಗಿ, ಮರಳಿ ಜೆಡಿಎಸ್ ಪಕ್ಷಕ್ಕೆ ಸೇರಿಕೊಂಡಿದ್ದಾರೆ.
ಹೌದು, ಸ್ವ-ಗ್ರಾಮ ಯಗಟಿಯಲ್ಲಿ ವೈಎಸ್ ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ಮರು ಸೇರ್ಪಡೆಗೊಂಡಿದ್ದಾರೆ. ಬಳಿಕ ಮಾತನಾಡಿ, ಕಡೂರು ಜೆಡಿಎಸ್ ಅಭ್ಯರ್ಥಿಯಾಗಿ ಏಪ್ರಿಲ್ 18ರಂದು ನಾಮಪತ್ರ ಸಲ್ಲಿಸುತ್ತೇನೆ. ನನ್ನ ಬೆಂಬಲಿಗರು ಹಾಗೂ ಕಾರ್ಯಕರ್ತರ ಅಭಿಪ್ರಾಯವನ್ನು ಪಡೆದೇ ಈ ತೀರ್ಮಾನ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ಈ ವೇಳೆ ಮಾತನಾಡಿದ ಪ್ರಜ್ವಲ್ ರೇವಣ್ಣ, ದತ್ತಾ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಬಾರದೆಂಬುದು ಎಚ್.ಡಿ ದೇವೇಗೌಡರ ಅಭಿಪ್ರಾಯವಾಗಿತ್ತು. ದತ್ತಾ ಜತೆಗೆ ನಮ್ಮ ಕುಟುಂಬ ಸದಾ ನಿಲ್ಲಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ‘ದೇವೆಗೌಡ್ರು ಖರ್ಗೆಯನ್ನೇ ಸಿಎಂ ಮಾಡಿ’ ಅಂದಿದ್ರು, ಆಗ ಮಾಡಿದ್ರಾ? : ಎಚ್.ಡಿ ಕುಮಾರಸ್ವಾಮಿ
ದತ್ತಾಗೆ ಕಡೂರು ಜೆಡಿಎಸ್ ಟಿಕೆಟ್?
ಕಡೂರು ಜೆಡಿಎಸ್ ಟಿಕೆಟ್ ವೈಎಸ್ ವಿ ದತ್ತಾಗೆ ಬದಲಾವಣೆ ಮಾಡುವುದು ಪಕ್ಕಾ ಆಗಿದ್ದು, ಸಂಸದ ಪ್ರಜ್ವಲ್ ರೇವಣ್ಣ ಇಂದಿನಿಂದಲೇ ಪ್ರಚಾರ ಆರಂಭಿಸಿ ಎಂದು ಸೂಚಿಸಿದ್ದಾರೆ. ಈಗಾಗಲೇ ಧನಂಜಯಗೆ ಜೆಡಿಎಸ್ ಟಿಕೆಟ್ ಘೋಷಿಸಿದೆ.
ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಬಳಿಕ ದತ್ತಾ, ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಪರಿಣಾಮ ಇಂದು ಎಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ಇಬ್ಬರೂ ದತ್ತಾ ಅವರ ಯಗಟಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು.