Wednesday, January 22, 2025

‘ಸರ್ವಾಧಿಕಾರಕ್ಕೆ ದಾರಿ, ಆಯ್ಕೆ ನಮ್ಮ ಕೈಯಲ್ಲಿದೆ’ : ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ

ಬೆಂಗಳೂರು : ಬಿಜೆಪಿ ಆಡಳಿತಕ್ಕೆ ಬಂದ ಮೇಲೆ ದೇಶ ಹಾಗೂ ರಾಜ್ಯದಲ್ಲಿ ಅಭಿವೃದ್ಧಿ ಹಾಗೂ ಪ್ರಜಾಪ್ರಭುತ್ವ ಅವನತಿಯತ್ತ ಸಾಗಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ (ಟ್ವಿಟರ್ ನಲ್ಲಿ) ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ವಿಡಿಯೋ ಸಂದೇಶ ನೀಡಿದ್ದಾರೆ.

ದೇಶದ ಅಭಿವೃದ್ಧಿ ಮತ್ತು ಪ್ರಜಾಪ್ರಭುತ್ವದ ರಕ್ಷಣೆ ಅಥವಾ ಪ್ರಜಾಪ್ರಭುತ್ವದ ಅವನತಿ, ಸರ್ವಾಧಿಕಾರಕ್ಕೆ ದಾರಿ, ಆಯ್ಕೆ ನಮ್ಮ ಕೈಯಲ್ಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ದೇಶದ ಜನತೆಗೆ ವಾಸ್ತವ ಸ್ಥತಿ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ : ಮೋದಿಯವರೇ, ಬಂಡೀಪುರವನ್ನು ಅದಾನಿಗೆ ಮಾರಬೇಡಿ : ಕಾಂಗ್ರೆಸ್ ವ್ಯಂಗ್ಯ

ಅಂಬೇಡ್ಕರ್ ಮೊದಲೇ ಎಚ್ಚರಿಸಿದ್ರು

ಬಲವಂತದಿಂದ ಬಾಯಿ ಮುಚ್ಚಿಸುವುದು ಮತ್ತು ರಾಷ್ಟ್ರ ವಿರೋಧಿ ಎಂದು ಬ್ರಾಂಡ್ ಮಾಡುವುದು ಅಪಾಯಕಾರಿಯಾದ ಬೆಳವಣಿಗೆ. ಈ ಪ್ರವೃತ್ತಿ ನಮ್ಮ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿ, ಸಂವಿಧಾನವನ್ನು ನಾಶ ಮಾಡುತ್ತದೆ. ನಾಯಕನ ಆರಾಧನೆ ಮತ್ತು ಭಕ್ತಿಯ ದುಷ್ಪರಿಣಾಮಗಳ ಬಗ್ಗೆ ಡಾ.ಬಿ.ಆರ್. ಅಂಬೇಡ್ಕರ್ ಮೊದಲೇ ಎಚ್ಚರಿಸಿದ್ದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಧರ್ಮದ ಪ್ರಕಾರ ಭಕ್ತಿ ಮೋಕ್ಷದ ದಾರಿಯಾಗಿದೆ. ಆದರೆ, ರಾಜಕೀಯದಲ್ಲಿ ಭಕ್ತಿ ಅಥವಾ ನಾಯಕನ ಆರಾಧನೆ, ದೇಶದ ಅವನತಿಗೆ ದಾರಿಯಾಗಲಿದೆ. ಅಂತಿಮವಾಗಿ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡಲಿದೆ ಎಂದು ಡಾ. ಅಂಬೇಡ್ಕರ್ ಹೇಳಿದ ಮಾತನ್ನು ಖರ್ಗೆ ಪುನರುಚ್ಚರಿಸಿದ್ದಾರೆ.

ಭಾರತ ಸರ್ಕಾರವು, ಸಂಸತ್ತನ್ನು ಚರ್ಚೆಗಿಂತ ಹೋರಾಟದ ಅಖಾಡವಾಗಿ ಬದಲಾಯಿಸಿದೆ. ಸತ್ಯದ ವಿರುದ್ಧ ಮಾತನಾಡಲು ಅಥವಾ ಧ್ವನಿ ಎತ್ತುವವರಿಗೆ ವಾಕ್ ಸ್ವಾತಂತ್ರ್ಯ ಇಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES