Monday, May 20, 2024

ಭಿನ್ನಮತ ಶೀಘ್ರ ಶಮನ ಆಗಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಪಕ್ಷ ತೊರೆದು ಬೇರೆ ಪಕ್ಷ ಸೇರುವುದು ಸಾಮಾನ್ಯ.ಇದು ಆಗ್ತಾನೇ ಇರುತ್ತೆ. ಅಸಮಾಧಾನಗೊಂಡ ನಾಯಕರ ಜೊತೆ ಪಕ್ಷದ ಹಿರಿಯರು ಮಾತನಾಡಿ ಮನವೊಲಿಕೆ ಮಾಡುತ್ತೇವೆ. ಶೀಘ್ರದಲ್ಲೇ ಭಿನ್ನಮತ ಶಮನವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಇನ್ನೂ 12 ಕ್ಷೇತ್ರ ಉಳಿದಿದೆ. ಕೆಲವೆಡೆ ಆಕಾಂಕ್ಷಿಗಳು, ವಿಧಾನ ಪರಿಷತ್ ಸದಸ್ಯರು ರಾಜೀನಾಮೆ ಕೊಟ್ಟಿದ್ದಾರೆ ಎಂದರು.

ರಾಜಕಾರಣದಲ್ಲಿ ಪಕ್ಷ ಬದಲಿಸೋದು ಸಾಮಾನ್ಯ :

ಬದಲಿಸೋದು ಸಾಮಾನ್ಯ, ಆಗ್ತಾ ಇರುತ್ತೆ. ಅಸಮಾಧಾನಗೊಂಡವರ ಮನವೊಲಿಕೆ ಮಾಡುತ್ತೇವೆ. ಪಕ್ಷದಲ್ಲಿ ಎದ್ದಿರುವ ಅಸಮಾಧಾನ ಸರಿಪಡಿಸಲಾಗುತ್ತಿದೆ. ಕಾರ್ಯಕರ್ತರು ಗಟ್ಟಿ ಇದ್ದಾರೆ, ಇದರಿಂದ ಯಾವುದೇ ಹಾನಿಯಾಗುವುದಿಲ್ಲ ಬಹುತೇಕ ಕಡೆ ಪಕ್ಷದ ಭಿನ್ನಮತ ಶಮನ ಆಗಲಿದೆ ಎಂದರು.

ಇದನ್ನೂ ಓದಿ : ‘ಜೀವ ಇರೋವರೆಗೂ ಕಾಂಗ್ರೆಸ್’ಗೆ ಹೋಗಲ್ಲ : ಸೊಗಡು ಶಿವಣ್ಣ

ಆರೋಪಗಳಲ್ಲಿ ಹುರುಳಿಲ್ಲ :

ಹಿರಿಯರ ಜತೆ ನಾನು ಹಾಗೂ ಹೈಕಮಾಂಡ್ ಮಾತಾಡುತ್ತಿದ್ದೇವೆ ಲಕ್ಷ್ಮಣ ಸವದಿ ಜನರ ವಿಶ್ವಾಸ ಉಳಿಸಿಕೊಳ್ಳಬೇಕು ಎಂದ ಅವರು ನೆಹರೂ ಓಲೇಕಾರ್ ಆರೋಪಗಳಲ್ಲಿ ಹುರುಳಿಲ್ಲ ಎಂದರು.

ಆರೋಪ ಸಾಬೀತು ಮಾಡಲಿ :

ಅಸಮಾಧಾನಿತರ ಜೊತೆ ಹೈಕಮಾಂಡ್ ಮಾತನಾಡುತ್ತಿದೆ.. ನಾನು ಎಲ್ಲಾ ನಾಯಕರ ಜೊತೆ ಮಾತನಾಡಿದ್ದೇನೆ. ಭಿನ್ನಮತ ಶೀಘ್ರವೇ ಬಗೆಹರಿಯುವ ವಿಶ್ವಾಸ ಇದೆ. ಸವದಿ ಹಿರಿಯರು, ಸುಧೀರ್ಘ ರಾಜಕೀಯದಲ್ಲಿದ್ದಾರೆ. ಸವದಿಗೆ ಜನರಿಂದಲೂ ಒತ್ತಡ ಇದೆ, ಸಮಯ ಬೇಕು. ನೆಹರು ಓಲೇಕಾರ್ ಯಾವ ಆರೋಪ ಬೇಕಾದರೂ ಮಾಡಲಿ. ದಾಖಲೆ ಸಹಿತ 1,500 ಕೋಟಿ ಆರೋಪ ಸಾಬೀತು ಮಾಡಲಿ. ಕೇವಲ ಹೇಳಿಕೆ ಬೇಡ, ದಾಖಲೆ ನೀಡಲಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ :

ಕಾಂಗ್ರೆಸ್ ನವರಿಗೆ 60ರಿಂದ 65 ಕ್ಷೇತ್ರಗಳಿಗೆ ಅಭ್ಯರ್ಥಿಗಳೇ ಇಲ್ಲ. ಈಗ ಆಮದು ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿ ಇದ್ದಾರೆ. ಕಾಂಗ್ರೆಸ್ ಗೆ ಸಮರ್ಥ ಅಭ್ಯರ್ಥಿ ಇಲ್ಲ, ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

 

ಏಪ್ರಿಲ್​ 11 ರಂದು ಅಭ್ಯರ್ಥಿಗಳ ಮೊದಲನೇ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ನಿನ್ನೆ 23 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪಕ್ಷ ಅಂತಿಮಗೊಳಿಸಿತ್ತು. ಈ ಪಟ್ಟಿಯಲ್ಲಿ ಬಿ.ವೈ.ವಿಜಯೇಂದ್ರ ಸೇರಿ 52 ಹೊಸಬರಿದ್ದಾರೆ. 8 ಮಹಿಳೆಯರು ಮತ್ತು ಒಬಿಸಿ 32, ಎಸ್‌ಸಿ 30, ಎಸ್‌ಟಿ 16 ಅಭ್ಯರ್ಥಿಗಳು ಪಟ್ಟಿಯಲ್ಲಿದ್ದಾರೆ. ಎರಡನೇ ಪಟ್ಟಿಯಲ್ಲಿ ನಾಲ್ಕು ಎಸ್‌ಸಿ ಮತ್ತು ಒಂದು ಎಸ್‌ಟಿ ಕ್ಷೇತ್ರಗಳು ಒಳಗೊಂಡಿವೆ. ಮೊದಲನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ಸಾಲು ಸಾಲಾಗಿ ಬಿಜೆಪಿ ನಾಯಕರು ರಾಜೀನಾಮೆ ಹಾಗೂ ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದಾರೆ.

RELATED ARTICLES

Related Articles

TRENDING ARTICLES