Wednesday, January 22, 2025

ಧೀರಜ್ ಮುನಿರಾಜು ನೇತೃತ್ವದಲ್ಲಿ ಕಮಲ ಹಿಡಿದ ‘ಕೈ’ ನಾಯಕರು

ದೊಡ್ಡಬಳ್ಳಾಪುರ : ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಕಾಂಗ್ರೆಸ್ ನಾಯಕರಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ನೂರಾರು ನಾಯಕರು ‘ಕೈ’ ಬಿಟ್ಟು ‘ಕಮಲ’ ಹಿಡಿದಿದ್ದಾರೆ.

ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬದಲಾವಣೆಯ ಪರ್ವ ಶುರುವಾಗಿದೆ. ಇಂದು ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಅವರ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಕ್ಷೇತ್ರದ ಹಾದ್ರಿಪುರ, ಕೋಡಿಹಳ್ಳಿ, ದೊಡ್ಡಬಳ್ಳಾಪುರ ನಗರದ 4ನೇ ವಾರ್ಡ್ ವಿನಾಯಕ ನಗರ, ಗಾಣಿಗರ ಪೇಟೆ,  ವಡ್ಡರಹಳ್ಳಿ , ದರ್ಗಾ ಜೋಗಹಳ್ಳಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಇದನ್ನೂ ಓದಿ : ಕನಕಪುರದಲ್ಲಿ 100% ಡಿಕೆಶಿ ಕಟ್ಟಿ ಹಾಕುತ್ತೇವೆ : ಅಶ್ವತ್ಥನಾರಾಯಣ

ಇದೇ ವೇಳೆ ಮಾತನಾಡಿದ ದೊಡ್ಡಬಳ್ಳಾಪುರ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಬಿಜೆಪಿ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಅನ್ಯ ಪಕ್ಷಗಳ ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಇನ್ನೂ ಸಾವಿರಾರು ಕಾರ್ಯಕರ್ತರು ಸೇರ್ಪಡೆಗೊಳ್ಳುತ್ತಾರೆ ಎಂದು ತಿಳಿಸಿದರು.

ಬಿಜೆಪಿ ಮೊದಲ ಪಟ್ಟಿಯಲ್ಲೇ ಅತಿ ಚಿಕ್ಕ ವಯಸ್ಸಿಗೆ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಹವಾ ಜೋರಾಗಿಯೇ ಇದೆ. ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES